ಮೈಸೂರು : ಸಂಸತ್ ಬಳಿಕ ಇದೀಗ ಪರಿಷತ್ ಚುನಾವಣೆ ಎದುರಿಸುತ್ತಿದ್ದೇವೆ. ನಮ್ಮ ರಾಜ್ಯದ ಆರು ಕ್ಷೇತ್ರಗಳಿಗೆ ಪರಿಷತ್ ಚುನಾವಣೆ ನಡೆಯುತ್ತಿದೆ.
ಆರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ.
ಶಿಕ್ಷಕರ ಪರವಾಗಿ ಕೆಲಸ ಮಾಡಲಿಕ್ಕೆ ನಮ್ಮ ಸರ್ಕಾರ ಇದೆ.
ಶಿಕ್ಷಕರು ಯಾವುದೇ ಅಂಜಿಕೆ ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಲು ಮನವಿ ಮಾಡುತ್ತೇನೆ ಎಂದು ಪುಷ್ಪಾ ಅಮರನಾಥ್ ಹೇಳಿದರು.
ಮರಿತಿಬ್ಬೆಗೌಡರು ತಮ್ಮದೇ ಆದ ವರ್ಚಸ್ಸನ್ನ ಹೊಂದಿದ್ದಾರೆ.ವಿರೋಧ ಪಕ್ಷದಲ್ಲಿದ್ದುಕೊಂಡೆ ಶಿಕ್ಷಕರ ಪರವಾಗಿ ಧ್ವನಿ ಎತ್ತಿದ್ದಾರೆ.ಈಗ ಪಕ್ಷ ಅಧಿಕಾರದಲ್ಲಿರುವಾಗ ಇನ್ನು ಹೆಚ್ಚಿನ ಕೆಲಸ ಮಾಡುವ ಶಕ್ತಿ ಸಿಗುತ್ತದೆ.ಎಲ್ಲಾ ಶಿಕ್ಷಕರು ಪದವೀಧರರು ಕಾಂಗ್ರೆಸ್ ಅಭ್ಯರ್ಥಿಗಳನ್ನ ಬೆಂಬಲಿಸುತ್ತಾರೆ ಎಂದು ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ್ ತಿಳಿಸಿದರು.