ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಡಿಸಿಎಂ ಡಾ ಅಶ್ವಥ್ ನಾರಾಯಣ್ ಸುದ್ದಿಗೋಷ್ಠಿ.
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ.
ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿತ್ತು.ಪೇ ಸಿಎಂ,40% ಅಭಿಯಾನ ನಡೆಸಿತು.
ಸಾಕಷ್ಟು ಸುಳ್ಳು ಆರೋಪಗಳನ್ನ ಬಿಜೆಪಿ ಸರ್ಕಾರದ ಮೇಲೆ ಮಾಡಿದ್ರು.
ಈಗ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದೆ.
ಈ ಒಂದು ವರ್ಷದಲ್ಲಿ ಕೊಲೆ, ಸುಲಿಗೆ, ಭ್ರಷ್ಟಾಚಾರ, ಮಾಡಿರೋದೇ ಕಾಂಗ್ರೆಸ್ ಸರ್ಕಾರದ ಸಾಧನೆ.
ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ.
ಜನರ ಆಶೋತ್ತರಗಳ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ.
ಈ ಸರ್ಕಾರದ ಭ್ರಷ್ಟಾಚಾರವನ್ನ ಆಚೆ ತರಲಿಕ್ಕೆ ಓರ್ವ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಸೂರಿನಲ್ಲಿ ರಾಜ್ಯ ಸರ್ಕಾರದ ಮಾಜಿ ಡಿಸಿಎಂ ಡಾ ಅಶ್ವಥ್ ನಾರಾಯಣ್ ಕಿಡಿ.
ಸರ್ಕಾರದಲ್ಲಿರುವವರ ನಡುವೆ ಪೈಪೋಟಿ ಏರ್ಪಟ್ಟಿದೆ.
ಸತ್ಯ ಹೇಳಲು ಸರ್ಕಾರಿ ನೌಕರ ಆತ್ಮಹತ್ಯೆ ಮಾಡಿಕೊಳ್ಳಬೇಕಾಯಿತು.ಡೆತ್ನೋಟ್ನಲ್ಲಿ ಬರೆದಿಟ್ಟರೂ ಯಾವುದೇ ಕ್ರಮ ಕೈಗೊಂಡಿಲ್ಲ.
ಯಾವುದೇ ಸೂಕ್ಷ್ಮತೆ ಇಲ್ಲದೆ ಎಫ್ಐಆರ್ ದಾಖಲು ಮಾಡಲಾಗಿದೆ.ಡೆತ್ನೋಟ್ನಲ್ಲಿರುವ ಆಪಾದಿತ ಅಧಿಕಾರಿಗಳ ಹೆಸರು ಇಲ್ಲ.
ಕೇವಲ ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲು ಮಾಡಿದ್ದಾರೆ. ಹಣ ವಾಪಾಸ್ ಬರುತ್ತೆ ಅಂತ
ಮಂತ್ರಿ ಒಪ್ಪಿಕೊಂಡಿದ್ದಾರೆ.
ಆರ್ಥಿಕ ಇಲಾಖೆ ಒಪ್ಪಿಗೆ ಇಲ್ಲದೆ ಅಕೌಂಟ್ ಓಪನ್ ಆಗಲು ಸಾಧ್ಯವೇ ?ಇದು ನೇರವಾಗಿ ನಿಮ್ಮ ಮೇಲೆಯೇ ಆಪಾದನೆ ಬಂದಿದೆ.ನಿಮ್ಮ ಹಿರಿತನ, ಅನುಭವಕ್ಕೆ ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕು ಎಂದು ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ್ ಆಕ್ರೋಶ ಹೊರ ಹಾಕಿದರು