ಮೈಸೂರು : ಮೈಸೂರು ಮತ್ತು ಕೊಡಗು ಸಂಸದರ ಯದುವೀರ್ ಕೃಷ್ಣದತ್ತ ಚಾಮರಾಜ ಓಡೆಯರ್ ರವರು ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣಿಸುವ ಸಂದರ್ಭದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಅಧಿಕಾರಿಗಳನ್ನು ಭೇಟಿ ಮಾಡಿದರು. ವಿಮಾನಯಾನ ಹಾಗೂ ವಿಮಾನ ಹಾರಾಟದ ಮಾಹಿತಿಯನ್ನು ಪಡೆದುಕೊಂಡರು. ಮೈಸೂರಿನ ವಿಮಾನ ನಿಲ್ದಾಣ ಹಾಗೂ ವಿಮಾನಯಾನವನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಅಗತ್ಯವಿರುವ ಕಾರ್ಯಗಳನ್ನು ಕೈಗೊಳ್ಳಲು ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಮಾಹಿತಿ ಪಡೆದುಕೊಂಡರು.ಸಂಭಂಧಪಟ್ಟವರೊಂದಿಗೆ ಚರ್ಚಿಸಿ ಶೀಘ್ರ ಕಾರ್ಯರೂಪಕ್ಕೆ ತರುವ ಬಗ್ಗೆ ಭರವಸೆ ನೀಡಿದ್ದಾರೆ.