ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತೋಷ್ ಲಾಡ್ ಫೌಂಡೇಷನ್ ಮತ್ತು ಶ್ವಾಸ ಯೋಗ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಿದರು.
ಬಳ್ಳಾರಿಯ JSW ಟೌನ್ ಶಿಪ್ ನಲ್ಲಿ ಆಯೋಜಿಸಿದ್ದ ಯೋಗದಿನದಲ್ಲಿ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ ಈ.ತುಕಾರಾಂ, ಸರ್ಕಾರದ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ನಟಿ ಶ್ರೀಲಾಲಾ, ವಚನಾನಂದ ಸ್ವಾಮೀಜಿ, ಶಾಸಕ ಶ್ರೀನಿವಾಸ್, KMF ಅಧ್ಯಕ್ಷ ಭೀಮಾನಾಯ್ಕ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.