ಹೊಸೂರು : ಹರದನಹಳ್ಳಿ ಗ್ರಾಮದ ವಿವಿಧ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗಾಗಿ ಒಂದು ಕೋಟಿ ಇಪ್ಪತ್ತು ಲಕ್ಷ ರೂಗಳನ್ನು ಮಂಜೂರು ಮಾಡಿಸಿದ್ದು ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ
ಡಿ.ರವಿಶಂಕರ್ ಹೇಳಿದರು.
ಸಾಲಿಗ್ರಾಮ ತಾಲೂಕಿನ ಹರದನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಬಿಎಂಸಿ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಚುನಾವಣೆಗಳ ಸಮಯದಲ್ಲಿ ಮಾತ್ರ ಪಕ್ಷ ರಾಜಕಾರಣವಿರುತ್ತದೆ ನಂತರದ ದಿನಗಳಲ್ಲಿ ಎಲ್ಲವನ್ನು ಬದಿಗೊತ್ತಿ ಕ್ಷೇತ್ರದ ಅಭಿವೃದ್ಧಿಗೆ ನಾವು ಆದ್ಯತೆಯನ್ನು ನೀಡುತ್ತೇವೆ. ಆ ನಿಟ್ಟಿನಲ್ಲಿ ಸಾಲಿಗ್ರಾಮ ಮತ್ತು ಕೆ.ಆರ್.ನಗರ ಅವಳಿ ತಾಲೂಕುಗಳಲ್ಲಿ ಯಾವುದೇ ಪಕ್ಷ ಅಥವಾ ಜಾತಿ ರಾಜಕಾರಣ ಮಾಡದೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು ಎಂದರು.
ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಗ್ರಾಮಗಳ ಸಮಸ್ಯೆಗಳೊಂದಿಗೆ ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸುವ ಕೆಲಸವನ್ನು ಮಾಡಲಾಗುವುದು ಎಂದರು.
ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅವುಗಳನ್ನು ಅನುಷ್ಠಾನ ಮಾಡುತ್ತಿರುವುದೇ ಜನಸಾಮಾನ್ಯರ ಅಭಿವೃದ್ಧಿಗಾಗಿಯೇ ಹೊರತು ಯಾವುದೇ ರಾಜಕೀಯ ಉದ್ದೇಶಕ್ಕಾಗಿಯಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿಯೇ ಹಾಲು ಉತ್ಪಾದಕರಿಗೆ ಅತಿ ಹೆಚ್ಚಿನ ಹಣವನ್ನು ನೀಡುತ್ತಿರುವುದು ನಮ್ಮ ಮೈಸೂರು ಜಿಲ್ಲಾ ಹಾಲು ಒಕ್ಕೂಟವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೈನುಗಾರಿಕಾ ಚಟುವಟಿಕೆಗಳಿಗೆ ಹೆಚ್ಚಿನ ಜನರು ತೊಡಗಿಸಿಕೊಂಡು ಕಾರ್ಯನಿರ್ವಹಿಸುತ್ತಿರುವುದರಿಂದ ಆ ಕುಟುಂಬಗಳ ಆರ್ಥಿಕ ಮಟ್ಟವು ಹೆಚ್ಚಲು ಪ್ರಮುಖ ಕಾರಣವಾಗಿದೆ. ರೈತರುಗಳು ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ದೊರಕುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಅಭಿವೃದ್ಧಿಯ ಪಥದತ್ತ ಸಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಾ.ಪಂ. ಮಾಜಿ ಅಧ್ಯಕ್ಷ ಎಚ್.ಟಿ.ಮಂಜಪ್ಪ, ಮೈಮುಲ್ ನಿರ್ದೇಶಕ ಎ.ಟಿ.ಸೋಮಶೇಖರ್, ಎಪಿಎಂಸಿ ಮಾಜಿ ಅಧ್ಯಕ್ಷ ನಟರಾಜ್, ಮೈಮುಲ್ ವ್ಯವಸ್ಥಾಪಕ ನಿರ್ದೇಶಕ ವಿಜಯ್ ಕುಮಾರ್, ವ್ಯವಸ್ಥಾಪಕ ಕರಿಬಸವರಾಜು, ಉಪ ವ್ಯವಸ್ಥಾಪಕ ಸಂತೋಷ್, ಸಹಾಯಕ ವ್ಯವಸ್ಥಾಪಕ ಪ್ರವೀಣ್ ಪತ್ತಾರ್, ಮಾರ್ಗ ವಿಸ್ತರಣಾಧಿಕಾರಿ ನೇಮಿನಾಥ ಮಾಕಾಣಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಎಚ್.ಟಿ.ಮಂಜು, ಹಾಲಿನ ಡೇರಿಯ ಅಧ್ಯಕ್ಷ ತಮ್ಮಯ್ಯ, ಉಪಾಧ್ಯಕ್ಷ ಕೃಷ್ಣೆಗೌಡ, ನಿರ್ದೇಶಕರುಗಳಾದ ರವಿ, ಮಂಜು, ಮಹೇಶ್, ನೀಲಮ್ಮ, ರಂಗಮ್ಮ, ಗೋಪಾಲಶೆಟ್ಟಿ, ಹೆಚ್.ಜೆ.ರವಿ, ಮೂರ್ತಿ,
ರಾಮಶೆಟ್ಟಿ, ಆನಂದನಾಯಕ, ಕಾರ್ಯದರ್ಶಿ ಗಣೇಶ್, ಪಿಡಿಒ ಮೋಹನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಭಾಕರ್, ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಸಂಘದ ಅಧ್ಯಕ್ಷ
ಜಿ.ಕೆ.ಮಹದೇವ್, ಉಪಾಧ್ಯಕ್ಷ ದಿನೇಶ್, ಮುಖಂಡರಾದ ಪ್ರಕಾಶ್, ಟಿ.ರವಿ, ಸಂದೀಪ್, ಗೋವಿಂದರಾಜು, ರಘು, ತಿಮ್ಮೇಗೌಡ, ತಮ್ಮಯ್ಯ, ಸಿಬ್ಬಂದಿಗಳಾದ ಸುಮನ್ ಕುಮಾರ್, ಚಂದ್ರುಮೂರ್ತಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.