ಚುನಾವಣೆಯಲ್ಲಿ ಸ್ಪರ್ಧಿಸುವ ಸುಳುವಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವ ಡಾ ರೇವಣ್ಣ ಇಂದು ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ ರೇವಣ್ಣ ಗೆ ಬಿಜೆಪಿ ಟಿಕೆಟ್ ಬಹುತೇಕ ಪೈನಲ್ ಎನ್ನಲಾಗುತ್ತಿದೆ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾದ ಅವರನ್ನು
ಬಿಜೆಪಿ ಬಾವುಟ ನೀಡುವ ಮೂಲಕ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷಕ್ಕೆ ಬರಮಾಡಿ ಕೊಂಡಿದ್ದಾರೆ
ಕಾರ್ಯಕ್ರಮದಲ್ಲಿ ಸಚಿವ ಸಿಪಿ ಯೋಗೇಶ್ವರ್,ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಮಂಗಳಸೋಮಶೇಖರ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು