ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಡ್ಯ ಸಂಸದರಾದ ಸುಮಲತಾ ಅಂಬರೀಶ್ ಹಾಗೂ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಬೇಟಿ ಮಾಡಿ ವಿವಾಹ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

ನರೇಂದ್ರ ಮೋದಿ ಅವರನ್ನು ಸುಮಲತಾ ಅಂಬರೀಶ್ ತಮ್ಮ ಪುತ್ರನ ಮದುವೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಇದೇ ವೇಳೆ ಪುತ್ರ ಅಭಿಷೇಕ್ ಅಂಬರೀಶ್ ಕೂಡ ಮೋದಿಯವರಿಗೆ ಮದುವೆಗೆ ಬರುವಂತೆ ಆಮಂತ್ರಣ ಕೊಟ್ಟಿದ್ದಾರೆ. ಇದೇ ವೇಳೆ ಅಭಿಷೇಕ್ ಕೈ ಹಿಡಿದು ಮೋದಿ ಕುಷಿಯಿಂದ ಮಾತನಾಡಿಸಿ ಶುಭಕೋರಿದ್ದಾರೆ.