ಮೈಸೂರು : ಮೈಸೂರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ 11.79 ಲಕ್ಷ ನಗದು ಸೀಜ್ ಮಾಡಲಾಗಿದೆ.
ತಪಾಸಣೆ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ವಶಪಡಿಸಿಕೊಳ್ಳಲಾಗಿದೆ.ಕೆ.ಎಸ್.ಆರ್.ಟಿ.ಸಿ.ಬಸ್ ನಲ್ಲಿ ಸಾಗಿಸುತ್ತಿದ್ದ ವೇಳೆ ಕರ್ತವ್ಯ ನಿರತ ಪೊಲೀಸರು ಹಣ ವಶಪಡಿಸಿಕೊಂಡಿದ್ದಾರೆ. ನಿಯಮಾನುಸಾರ ಸಂಭಂಧಪಟ್ಟ ಇಲಾಖೆಗೆ ಮಾಹಿತಿ ತಿಳಿಸಿದ ಪೊಲೀಸರು ವಶಪಡಿಸಿಕೊಳ್ಳಲಾದ ಹಣವನ್ನು ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.