– ಮೋದಿ ಕಂಪ್ಲೀಟ್ ಟೂರ್ ಪ್ರೋಗ್ರಾಂ ಲಿಸ್ಟ್
ಮೈಸೂರು : ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಮೈಸೂರು ಪ್ರವಾಸಕ್ಕೆ ಇಂದು ಸಂಜೆ ನಗರಕ್ಕೆ ಆಗಮಿಸುತ್ತಿದ್ದು . ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ವರೆಗೆ ಒಟ್ಟು 7 ಬಾರಿಗೆ ಮೈಸೂರಿಗೆ ಆಗಮಿಸಿರುವ ನರೇಂದ್ರಮೋದಿ 4 ಬಾರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಿದ್ದಾರೆ. ಎರಡನೇ ಬಾರಿ ಪ್ರಧಾನಿ ಆದ ನಂತರ 4 ನೇ ಬಾರಿ ಮೋದಿ ಮೈಸೂರು ನಗರಕ್ಕೆ ಆಗಮಿಸುತ್ತಿದ್ದಾರೆ.

ಏಪ್ರಿಲ್ 8 ರಾತ್ರಿ 8.45ಕ್ಕೆಚೆನೈನಿಂದ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು,
ರ‌್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಏಪ್ರಿಲ್ 9 ಬೆಳಿಗ್ಗೆ 6.20 ಮೈಸೂರು ವಿಷೇಶ ಹೆಲಿಪ್ಯಾಡ್‌ನಿಂದ ಚಾಮರಾಜನಗರದ ಮೇಲುಕಾಮನಹಳ್ಳಿ ಹೆಲಿಪ್ಯಾಡ್‌ಗೆ ಪ್ರಯಣ ಬೆಳೆಸಿ
ಬೆಳಿಗ್ಗೆ 7.15ಕ್ಕೆ ಬಂಡೀಪುರಕ್ಕೆ ಭೇಟಿ ನೀಡಿ ಮೋದಿ ಸಫಾರಿ ನಡೆಸಲಿದ್ದಾರೆ.

ನಂತರ ಅಲ್ಲಿಂದ ರಸ್ತೆ ಮಾರ್ಗವಾಗಿ ತೆಪ್ಪಕಾಡು ಆನೆ ಕ್ಯಾಂಪ್‌ಗೆ ಭೇಟಿ ನೀಡಲಿದ್ದಾರೆ.ಸುಮಾರು 2 ಗಂಟೆಗಳ ಕಾಲ ಅರಣ್ಯದಲ್ಲಿ ಕಾಲ ಕಳೆಯಲಿರುವ ಪ್ರಧಾನಿ
ಬೆಳಿಗ್ಗೆ 10.20ಕ್ಕೆ ಮೈಸೂರಿಗೆ ವಾಪಸ್ ಆಗಲಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಓವೆಲ್ ಮೈದಾನದ ವಿಶೇಷ ಹೆಲಿಪ್ಯಾಡ್‌ಲ್ಲಿ ಇಳಿಯಲಿರುವ ಮೋದಿ,10.30ಕ್ಕೆ ಕರ್ನಾಟಕ ಮುಕ್ತ ವಿವಿ ಘಟಿಕೋತ್ಸವ ಭವನಕ್ಕೆ ಆಗಮಿಸಿ
ಹುಲಿ ಯೋಜನೆ 50ನೇ ವರ್ಷದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಳಿದ್ದಾರೆ.
ಕಾರ್ಯಕ್ರಮದಲ್ಲಿ ದೇಶ ವಿದೇಶಗಳ ಗಣ್ಯರು ಭಾಗಿಯಾಗಳಿದ್ದು, ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಮಾಡಲಾಗಿದೆ. ನಂತರ 12.10 ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಿ 12.40ಕ್ಕೆ ದೆಹಲಿಗೆ ವಾಪಸ್ ಆಗಲಿದ್ದಾರೆ.