ಮೈಸೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಎಲ್ಲಾ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ ಎಂದು
ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ತಿಳಿಸಿದರು.

ಡಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೆ ನಾಳೆ ಅಧಿಸೂಚನೆ ಹೊರಡಿಸಲಾಗುವುದು.ನಾಳೆಯಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಟ್ಟಿದ್ದೇವೆ ಎಂದರು

ಏಪ್ರಿಲ್ 20ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇದೆ.
ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯುತ್ತದೆ, ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಏಪ್ರಿಲ್ 24 ಕಡೆಯ ದಿನವಾಗಿದೆ ಎಂದರು. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತಗಳ ಎಣಿಕೆ ನಡೆಯಲಿದೆ. ಮೇ 15 ಕ್ಕೆ ಚುನಾವಣಾ ಪ್ರಕ್ರಿಯೆಗೆ ತೆರೆ ಬೀಳಲಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಾದ್ಯಂತ 15936 ಮತದಾರರಿಂದ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಿದ್ದಾರೆ. ಇದರ
ಪರಿಣಾಮ ಮೈಸೂರು ಜಿಲ್ಲೆಯ ಮತದಾರರ ಸಂಖ್ಯೆ 2638487 ಕ್ಕೆ ಏರಿಕೆಯಾಗಿದೆ ಎಂದರು.

ಈ ಬಾರಿ 1308771 ಪುರುಷ ಮತದಾರರು 1329493 ಮಹಿಳಾ ಮತದಾರರು, 223 ಇತರೆ ಮತದಾರರು ಇದ್ದಾರೆ.
ಮೈಸೂರು ಜಿಲ್ಲೆಯಾದ್ಯಂತ 2905 ಮತಗಟ್ಟೆಗಳು ಸ್ಥಾಪನೆ ಮಾಡಿದ್ದೇವೆ ಎಂದು ತಿಳಿಸಿದರು. ಮಾದರಿ ನೀತಿ ಸಂಹಿತೆ ಹಾಗು ಅಭ್ಯರ್ಥಿಗಳ ವೆಚ್ಚದ ಮೇಲೆ ನಿಗಾ ಇಡಲು ತಂಡಗಳ ರಚನೆ ಮಾಡಿದ್ದೇವೆ. ಇದುವರೆಗೂ ಮೈಸೂರು ಜಿಲ್ಲೆಯಾದ್ಯಂತ 1 ಕೋಟಿ 39 ಲಕ್ಷದ 26,353 ನಗದು ವಶ ಮಾಡಿಕೊಂಡಿರುವುದಾಗಿ ತಿಳಿಸಿದರು.
3 ಕೋಟಿ 63 ಲಕ್ಷದ 40561. ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ ಆಗಿದೆ.614250 ರೂಪಾಯಿ ಮೌಲ್ಯದ ಅಮಲು ಪದಾರ್ಥ ಸೀಜ್ ಮಾಡಿದ್ದೇವೆ ಜಿಲ್ಲೆಯಲ್ಲಿ ಯಾವುದೇ ಅಕ್ರಮ ಆಗದಂತೆ ತಡೆಯಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದರು

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಸೀಮಾ ಲಾಟ್ಕರ್ ಹಾಗೂ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾತನಾಡಿ, ಜಿಲ್ಲೆಯಾದ್ಯಂತ ವ್ಯಾಪಕ ಭದ್ರತೆ ಒದಗಿಸಲಾಗಿದೆ. ಈಗಾಗಲೇ ಪ್ಯಾರಾ ಮಿಲಿಟರಿ ಪಡೆಯ 5 ತುಕಡಿಗಳು ಮೈಸೂರಿಗೆ ಆಗಮನವಾಗಿದೆ.ಸದ್ಯದಲ್ಲೇ 8 ಪ್ಯಾರಾ ಮಿಲಿಟರಿ ತುಕಡಿಗಳು ಮೈಸೂರಿಗೆ ಬರಲಿದೆ ಎಂದರು.
ಕಳೆದೊಂದು ವಾರದಿಂದ ಮೈಸೂರು ನಗರದ ಜೊತೆಗೆ ಜಿಲ್ಲೆಯಾದ್ಯಂತ ಸುಮಾರು 164 ಹಳ್ಳಿಗಳಲ್ಲಿ ಪ್ಯಾರಾ ಮಿಲಿಟರಿ ಪಡೆ ಯೋಧರಿಂದ ಪಥ ಸಂಚಲನ ನಡೆದಿದೆ.
ಜನರಿಗೆ ಆತ್ಮ ಸ್ಥೈರ್ಯ ತುಂಬಲು ನಡೆಯುತ್ತಿರುವ ಪಥ ಸಂಚಲನ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.