ಬೆಂಗಳೂರು : ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನಲೆ ಲಕ್ಷ್ಮಣ್ ಸವದಿ ಬಿಜೆಪಿಗೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ.
ಬೆಳಗಾವಿಯ ಸಂಬ್ರಾ ವಿಮಾನ ನಿಲ್ದಾಣದಲ್ಲಿ ಡಿಕೆಶಿ ಶಿವಕುಮಾರ್ ಹೆಸರಿನಲ್ಲಿ ಮಾಡಿದ್ದ ಬುಕ್ ಮಾಡಿದ್ದ ವಿಮಾನದಲ್ಲಿ ಪ್ರಯಾಣಿಸಿದ್ದಾರೆ ಎನ್ನಲಾಗಿದೆ.ಅಲ್ಲದೆ ಲಕ್ಷ್ಮಿ ಹೆಬ್ಬಾಳ್ಕರ್ ಸಂಬಂಧಿ ಎಂ.ಎಲ್.ಸಿ ಒಬ್ಬರು ಸವದಿ ಜೊತೆ ಇದ್ದರೂ ಎಂದು ತಿಳಿದುಬಂದಿದೆ.
ಬೆಂಗಳೂರಿನ ಸಿದ್ದರಾಮಯ್ಯ ನಿವಾಸದಲ್ಲಿ ಸವದಿ ಡಿಕೆ ಶಿವುಕುಮಾರ್, ಸಿದ್ದರಾಮಯ್ಯ ಹಾಗೂ ಸರ್ಜೇವಲಾ ಸಭೆ ನಡೆಸಿದ್ದಾರೆ. ನನ್ನ ಮಗನಿಗೆ ಟಿಕೆಟ್ ನೀಡಬೇಕು ಹಾಗಿದ್ದಾರೆ ಮಾತ್ರ ನಾನು ಕಾಂಗ್ರೆಸ್ ಸೇರುತ್ತೇನೆ ಎಂದು ಸವದಿ ಕಂಡೀಷನ್ ಹಾಕಿದ್ದಾರೆ ಎಂದು ತಿಳಿದುಬಂದಿದೆ
ಒಟ್ಟಿನಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ರಾಜ್ಯ ಬಿಜೆಪಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಒಬ್ಬೊಬ್ಬರಾಗಿ ಬಿಜೆಪಿಗೆ ರಾಜೀನಾಮೆ ನೀಡಿ ಹೊರ ನಡೆಯುತ್ತಿದ್ದಾರೆ. ಇದರಿಂದ ಮೇಲ್ಮನೆಯಲ್ಲು ಬಿಜೆಪಿ ಬಹುಮತ ಇಲ್ಲದಂತಾಗಿದೆ