ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಗುಡ್ ಬೈ ಹೇಳಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ
ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿಂದು ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ, ಟಿಕೆಟ್ ಸಿಗದ ಹಿನ್ನಲೆ ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದ ಶೆಟ್ಟರ್ ಇದೀಗ ಮಾತೃ ಪಕ್ಷದ ವಿರುದ್ಧವೇ ಸಮರ ಸಾರಿದ್ದಾರೆ
ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೆಟ್ಟರ್ ಸ್ಪರ್ದೆ ಮಾಡಲಿದ್ದಾರೆ. ಜಗದೀಶ್ ಶೆಟ್ಟರ್ ಸೇರ್ಪಡೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಗೆ ಆನೆ ಬಲ ಬಂದಂತಾಗಿದೆ. ಅಲ್ಲದೆ ಅಕ್ಕ ಪಕ್ಕದ ಕಾಂಗ್ರೆಸ್ ಗೆಲುವಿಗೆ ಶೆಟ್ಟರ್ ಪಾತ್ರ ಮಹತ್ವದ್ದು ಎಂದು ಕಾಂಗ್ರೆಸ್ ಅಭಿಪ್ರಾಯ
ಈ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಶೆಟ್ಟರ್ ಸಜ್ಜನ ವ್ಯಕ್ತಿ ಅವರನ್ನು ಬಿಜೆಪಿ ಅವಮಾನಿಸಿದೆ. ಅವರು ನಮ್ಮ ಪಕ್ಷ ಸೇರ್ಪಡೆಯಿಂದ ನಮಗೆ ಮತ್ತಷ್ಟು ಬಲ ಬಂದಿದೆ ಎಂದರು