ಮೈಸೂರು: ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕಲಾಮಂದಿರದ ಆವರಣದಲ್ಲಿ ಮೈಸೂರಿನ ಸಾಂಪ್ರಾದಾಯಿಕ ಉಡುಗೆ ತೊಡುವ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ವೇಳೆ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಮಾತನಾಡಿ, ಜಿಲ್ಲಾದ್ಯಂತ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ಇಂದು ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವರ್ಗದಿಂದ ಮೈಸೂರಿನ ಸಾಂಪ್ರದಾಯಿಕ ಉಡುಪುಗಳಾದ ಮೈಸೂರು ಸಿಲ್ಕ್ ಪಂಚೆ, ಮೈಸೂರು ಪೇಟ, ಮೈಸೂರು ಸಿಲ್ಕ್ ಸೀರೆ ಉಟ್ಟು ಮತದಾನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜರಾಂ, ಪೊಲೀಸ್ ವರಿಷ್ಠಾಧಿಕಾರಿಯಾದ ಸೀಮಾ ಲಾಟ್ಕರ್, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ನೌಕರರು ಸೇರಿದಂತೆ ಇತರರು ಹಾಜರಿದ್ದರು.
ಜಿಲ್ಲಾಡಳಿತದ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ
Leave a comment
Leave a comment