ಸುತ್ತೂರು : ರಾಜ್ಯದ ಅಭಿವೃದ್ದಿಯಲ್ಲಿ ಸಿದ್ದರಾಮಯ್ಯರವರ ಸರ್ಕಾರದ ಪಾತ್ರ ಅಪಾರವಾಗಿದೆ ಎಂದು ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು.
ಮಾಜಿ ಸಚಿವ ಡಾ ಹೆಚ್.ಸಿ.ಮಹದೇವಪ್ಪರವರು ತಮ್ಮ ಹುಟ್ಟುಹಬ್ಬವನ್ನು ಅಪಾರ ಅಭಿಮಾನಿಗಳು ಹಾಗೂ ಬೆಂಬಲಿಗರೊAದಿಗೆ ಆಚರಿಸಿಕೊಂಡು ನಂತರ ಮುಂದಿನ ತಿಂಗಳು ನಡೆಯಲಿರುವ ವಿಧಾನ ಸಭಾ ಚುನಾವಣೆಗೆ ಟಿ.ನರಸೀಪುರ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಅಪಾರ ಬೆಂಬಲಿಗರು ಹಾಗು ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸಿದ ವೇಳೆ ಮಾತನಾಡಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೇಸ್ ಸರ್ಕಾರದಲ್ಲಿ ನಾನು ಲೋಕೋಪಯೋಗಿ ಸಚಿವರಾಗಿದ್ದ ವೇಳೆ ನಿರ್ಮಾಣ ಮಾಡಲಾಗಿದ್ದ ನೂತನ ರಸ್ತೆ ನಿರ್ಮಾಣ ಹಾಗೂ ಸೇತುವೆಗಳು ಸೇರಿದಂತೆ ನಮ್ಮ ಸರ್ಕಾರದಿಂದ ಮಾಡಿದ ಹಲವಾರು ಯೋಜನೆಗಳು ಮತ್ತು ಅಭಿವೃದ್ದಿ ಕೆಲಸಗಳನ್ನು ನೋಡಿ ಮತದಾರರು ಕಾಂಗ್ರೇಸ್ ಪಕ್ಷಕ್ಕೆ ಬೆಂಬಲ ನೀಡಿ ನನ್ನನ್ನು ಚುನಾವಣೆಯಲ್ಲಿ ಆಶೀರ್ವದಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಜರಬಾದ್, ನಟರಾಜ್ ಡಾ.ಜೆ.ಜೆ.ಆನಂದ್ ಮಾಜಿ ಉಪಮೇಯರ್ ಸಿದ್ದರಾಜು, ನಜರಬಾದ್ ಲೋಕೇಶ್, ಕಾಂಗ್ರೆಸ್ ಮುಖಂಡರುಗಳು ಕಾರ್ಯಕರ್ತರು ಹಾಜರಿದ್ದರು.