ಟಿ.ನರಸೀಪುರ : ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಇಂದು ನರಸೀಪುರ ಮೀಸಲು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೇವಣ್ಣ ಅವರ ಪರ ಅಬ್ಬರದ ಪ್ರಚಾರ ಮಾಡಿದರು.

ಗುಂಜ ನರಸಿಂಹಸ್ವಾಮಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟ ವಿಜಯೇಂದ್ರ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬಿ ಈ ಬಾರಿ ಬಿಜೆಪಿ ಗೆಲ್ಲಿಸಿ ಎಂದು ಮನವಿ ಮಾಡಿದರು. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ. ಹಾಗೂ ಬೊಮ್ಮಾಯಿ ಸರ್ಕಾರ ರಾಜ್ಯದಲ್ಲಿ ಅನೇಕ ಅಭಿವೃದ್ದಿ ಯೋಜನೆಗಳನ್ನು ತಂದಿದೆ, ತಿ ನರಸೀಪುರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ರೇವಣ್ಣ ಅವರನ್ನು ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಿದರು. ವಿಜಯೇಂದ್ರ ಬರುತ್ತಾರೆ ಎಂದು ತಿಳಿದಿದ್ದ ಕ್ಷೇತ್ರದ ಜನ ದಾರಿಯುದ್ದಕ್ಕೂ ಜೈಕಾರ ಹಾಕಿ ಸ್ವಾಗತಿಸಿದರು.