ಮೈಸೂರು: ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ಕಾರ್ಯಕರ್ತರು ಕಟ್ಟಿ ಬೆಳೆಸಿರುವ ಪಕ್ಷ.
ಈ ಬಾರಿಯ ಚುನಾವಣೆಯಲ್ಲಿ ಸರ್ವೇ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ವೈದ್ಯರು, ಇಂಜಿನಿಯರ್, ವಕೀಲರು, ಸಮಾಜ ಸೇವಕರು ಸೇರಿದಂತೆ ಸಮಾಜದ ವಿವಿಧ ವಲಯಗಳ ಪ್ರಮುಖರಿಗೆ ಟಿಕೆಟ್ ನೀಡಲಾಗಿದೆ ಎಂದರು.
ಕರ್ನಾಟಕ ದೇಶದ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿಕೊಂಡು ಬಂದಿದೆ.ಜಿ ಎಸ್ ಟಿ ಸಂಗ್ರಹಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಕರ್ನಾಟಕದ ಮಹತ್ವ ಗೊತ್ತಿದೆ.
ಉತ್ತರಪ್ರದೇಶ, ಗುಜರಾತ್ ನಲ್ಲಿ ಪ್ರಯೋಗಗಳನ್ನು ಮಾಡಿದಂತೆ ರಾಜ್ಯದಲ್ಲೂ ಹೊಸ ಪ್ರಯೋಗ ಮಾಡಲಾಗಿದೆ ಎಂದು ತಿಳಿಸಿದರು.
ರಾಜ್ಯದ ಮುಂದಿನ 40-50 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಟಿಕೆಟ್ ಹಂಚಿಕೆ ಮಾಡಲಾಗಿದೆ.
ಆದರೆ ದೇಶವನ್ನು ದಿವಾಳಿ ಮಾಡಿರುವ ಕಾಂಗ್ರೆಸ್ ಪಕ್ಷ ಹೇಗಾದರೂ ಮಾಡಿ ಅಧಿಕಾರ ಹಿಡಿದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಕರ್ನಾಟಕ ಎಟಿಎಂ ಆಗಬೇಕೆಂದು ಬಯಸಿದ್ದಾರೆ.ಜೆಡಿಎಸ್ ನವರು ಅತಂತ್ರ ಫಲಿತಾಂಶ ಬರಲೆಂದು ಕಾಯುತ್ತಿದ್ದಾರೆ.ಆದರೆ ರಾಜ್ಯದ ಜನರು ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ಕೇಂದ್ರ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಗುರ್ತಿಸಿ ಮತ್ತೊಮ್ಮೆ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಲಿದ್ಧಾರೆ.
ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.