ಮೈಸೂರು: ಮುಖ್ಯಮಂತ್ರಿ ಸಮುದಾಯದ ಪ್ರತಿನಿಧಿ ಅಲ್ಲ, ನಾಡಿನ ಪ್ರತಿನಿಧಿ, ಸಿಎಂ ಹುದ್ದೆಯನ್ನು ಜಾತಿಗೆ ಸೀಮಿತ ಮಾಡಬೇಡಿ ಎಂದು ಕುಮರಸ್ವಾಮಿ ಹೇಳಿದರು.
ಸಂದರ್ಭಕ್ಕೆ ಅನುಗುಣವಾಗಿ ರಾಜಕೀಯ ಪಕ್ಷಗಳು ನಾಯಕರನ್ನು ಆಯ್ಕೆ ಮಾಡುತ್ತವೆ.ಆದರೆ ನಾಡಿನ ಹಿತದೃಷ್ಟಿ ಇಟ್ಟುಕೊಂಡು ಸಿಎಂ ಕೆಲಸ ಮಾಡಬೇಕು. ಲಿಂಗಾಯತ ಸಮುದಾಯದ ಕುರಿತು ಸಿದ್ದರಾಮಯ್ಯ ಹೇಳಿಕೆ ಸರಿಯಲ್ಲ ಎಂದು ಕುಮರಸ್ವಾಮಿ ತಿಳಿಸಿದರು.
ಸಿದ್ದರಾಮಯ್ಯ ಒಬ್ಬ ಅನುಭವಿ ರಾಜಕಾರಣಿ.
ಅಂಥವರ ಬಾಯಲ್ಲಿ ಆ ಮಾತು ಯಾಕೆ ಬಂತು ಅಂತ ಗೊತ್ತಿಲ್ಲ.ಯಾವ ಅರ್ಥದಲ್ಲಿ ಆ ಮಾತು ಹೇಳಿದ್ದರೋ ಗೊತ್ತಿಲ್ಲ.ಭ್ರಷ್ಟಾಚಾರ ವಿಚಾರ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ ಎಂದು ಸ್ಪಷ್ಟ ಪಡಿಸಿದರು.