ಮೈಸೂರು: ಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ, ದಡ್ಡ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವರುಣದಲ್ಲಿ 1 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ, ಅದು ಸಾಧ್ಯಾನಾ ಅಷ್ಟು ಮತಗಳ ಅಂತರ ಹೇಗೆ ಸಿಗುತ್ತೆ ? ಒಬ್ಬ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಮಾತನಾಡುವ ಮೊದಲು ಸ್ವಲ್ಪ ಯೋಚನೆ ಮಾಡಿ ಮಾತನಾಡಬೇಕು ಎಂದರು.
ವರುಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ 8 ಸಾವಿರ ಮತಗಳ ಅಂತರವಿದೆ, ಈ ಬಾರಿ ನಮ್ಮ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ವರುಣ ಕಡೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ ಯಾರು ಎಷ್ಟು ವೋಟ್ ತಗೋತಾರೆ ಅಂತ ಪಲಿತಾಂಶ ಬಂದಾಗ ಗೊತ್ತಾಗಲಿದೆ ಮೈಸೂರಿನ 11 ಕ್ಷೇತ್ರಗಳಲ್ಲಿ ನಾವು ಈ ಬಾರಿ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು