ಸಿದ್ದಾರ್ಥ ನಗರ ವಾರ್ಡ್ ನಂಬರ್ 53 ರಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಟಿ ಎಸ್ ಶ್ರೀವತ್ಸ ಪ್ರಚಾರ ನಡೆಸಿದರು.ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ’ ಎಂದು ಅಭ್ಯರ್ಥಿ ಟಿ ಎಸ್ ಶ್ರೀವತ್ಸ ಮನವಿ ಮಾಡಿದರು.
ಸಿದ್ದಾರ್ಥ ಲೇಔಟ್ ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ದೇಶ ಕಂಡ ಅಪರೂಪದ ಪ್ರಧಾನಿ ನರೇಂದ್ರ ಮೋದಿ. ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನಸ್ನೇಹಿ ಮುಖ್ಯಮಂತ್ರಿ ಎಂದು ಹೆಸರು ಪಡೆದು ಕೊಂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯ ಗಳನ್ನು ಜನರ ಮುಂದಿಟ್ಟು ಮತವನ್ನು ಕೇಳುತ್ತಿದ್ದೇನೆ. ಅದೇ ರೀತಿ ಕ್ಷೇತ್ರದಲ್ಲಿ ಬಿಜೆಪಿ ಪರವಾದ ಅಲೆಯಿದ್ದು, ಬಿಜೆಪಿ ಗೆಲುವು ಖಚಿತ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸಂದರ್ಭದಲ್ಲಿ ಉಪ ಮಹಾಪೌರರಾದ ಡಾ. ಜಿ ರೂಪ, ನಗರಪಾಲಿಕೆ ಸದಸ್ಯರಾದ ಕೆ.ಜೆ ರಮೇಶ್, ಬಿಜೆಪಿ ಮುಖಂಡರಾದ ಪಂಚ್ಯಾಜನ್ಯ ವಿನಯ್, ಜೀವನ್ ,ಅರ್ಜುನ್, ಮಹೇಶ್, ಪುನೀತ್, ರಾಕೇಶ್ ,ಯೋಗೇಶ್, ಬಾಬು ಇನ್ನು ಹಲವಾರು ವಾರ್ಡಿನ ಪ್ರಮುಖರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು