ಮೈಸೂರು : ಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ನಮ್ಮ ರಾಜ್ಯಕ್ಕೆ ನೀಡಿರುವ ಕೊಡುಗೆಯಾದರೂ ಏನು ಲಜ್ಜೆಗೆಟ್ಟಿರುವ ಕರ್ನಾಟಕದ ಭ್ರಷ್ಟ ಬಿಜೆಪಿಯನ್ನು ಮೊದಲು ಸರಿಪಡಿಸಿ ಎಂದು ಎಂ.ಎಲ್.ಸಿ ವಿಶ್ವನಾಥ್ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೇರೆ ಬ್ಯಾಂಕುಗಳ ಜೊತೆ ವಿಲೀನಗೊಳಿಸಿರುವ ನಮ್ಮ ಬ್ಯಾಂಕುಗಳನ್ನು ವಾಪಸ್ ಕೊಡಿ.ಹಿಂದಿ ಹೇರಿಕೆಯನ್ನು ನಿಲ್ಲಿಸಿ.ನಂದಿನಿಯ ಅಸ್ತಿತ್ವಕ್ಕೆ ಧಕ್ಕೆ ತರಬೇಡಿ.
ಯಾವುದೇ ಕಾರಣಕ್ಕೂ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಮೋದಿ ಭೇಟಿಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ನಮ್ಮಂತಹವರು, ಕುಮಾರಸ್ವಾಮಿ ಅಂತಹವರ ನೆರವಿನಿಂದ ಬಿಜೆಪಿ ಅಧಿಕಾರಕ್ಕೆ ಬಂತು.ಇನ್ನೆಂದಿಗೂ ಕರ್ನಾಟಕ ಮಾತ್ರವಲ್ಲದೆ ಇಡೀ ದಕ್ಷಿಣ ಭಾರತದಲ್ಲೇ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.