ರಾಯಚೂರು : ಮೋದಿ ನೇತೃತ್ವದಲ್ಲಿ ಭಾರತ ಅಭಿವೃದ್ಧಿ ಆಗುತ್ತಿದ್ದು, ರಾಮಾಯಣ ಕಾಲದಲ್ಲಿ ಹನುಮಂತ ತ್ಯಾಗ ಮಾಡಿದಂತೆ ಈಗಿನ ಕಾಲದಲ್ಲಿ ದೇಶಕ್ಕಾಗಿ ಮೋದಿ ತ್ಯಾಗ ಮಾಡುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು.
ಕರ್ನಾಟಕ ವಿಧಾನಸಭಾ ಚುನಾಚಣೆ ಹಿನ್ನೆಲೆಯಲ್ಲಿ ರಾಯಚೂರಿನ ಮತದಾರರನ್ನ ಉದ್ದೇಶಿಸಿ ಮಾತನಾಡಿದ ಅವರು, ಕನ್ನಡದಲ್ಲಿ ಭಾಷಣ ಆರಂಭಿಸಿ ‘ತುಂಗಾ, ಕೃಷ್ಣ ನದಿ ಹರಿಯುವ ಹರಿದಾಸರ ನಾಡಿನ ಜನರಿಗೆ ನಮಸ್ಕಾರ’ ಎಂದರು. ಇದು ಹರಿದಾಸರ ಭೂಮಿಯಾಗಿದೆ. ಭಾರತದ ಸನಾತನ ಧರ್ಮದ ಸಂದೇಶ ನಾಡಿನ ತುಂಬಾ ಹರಡಿದ್ದಾರೆ. ನಿಜಾಮರ ವಿರುದ್ಧ ಹೋರಾಟ ಮಾಡಿ ಪ್ರಾಣ ತ್ಯಾಗ ಮಾಡಿದ ನಾಗರಿಕರಿಗೆ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು.
ನಾನು ಅಯೋಧ್ಯೆ ಪುಣ್ಯ ಭೂಮಿಯಿಂದ ಇಲ್ಲಿಗೆ ಬಂದಿದ್ದೇನೆ. ಉತ್ತರ ಪ್ರದೇಶ ಮತ್ತು ಕರ್ನಾಟಕಕಕ್ಕೆ ರಾಮ- ಹನುಮಂತನ ಸಂಬಂಧ ಇದ್ದಂತೆ. ನಾನು ಇವತ್ತು ಹನುಮಂತನ ಭೂಮಿಗೆ ಬಂದಿದ್ದಕ್ಕೆ ಖುಷಿಯಾಗಿದೆ. ಭಾರತ ಮೋದಿ ನೇತೃತ್ವದ ಅಭಿವೃದ್ಧಿ ಆಗುತ್ತಿದೆ ರಾಮಾಯಣ ಕಾಲದಲ್ಲಿ ಹನುಮಂತ ತ್ಯಾಗ ಮಾಡಿದಂತೆ ಈಗಿನ ಕಾಲದಲ್ಲಿ ದೇಶಕ್ಕಾಗಿ ಮೋದಿ ತ್ಯಾಗ ಮಾಡುತ್ತಿದ್ದಾರೆ. ಭಾರತದ ಅಭಿವೃದ್ಧಿ ಇಡೀ ವಿಶ್ವವೇ ಎದುರು ನೋಡುವಂತೆ ಆಗುತ್ತಿದೆ. ರಾಮಾಯಣ ಕಾಲದಲ್ಲಿ ಹನುಮಂತ ತ್ಯಾಗ ಮಾಡಿದಂತೆ, ಈಗಿನ ಕಾಲದಲ್ಲಿ ದೇಶಕ್ಕಾಗಿ ಮೋದಿ ತ್ಯಾಗ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಯಚೂರಿನಲ್ಲಿ ರೈಲು, ವಿಮಾನ, ಏಮ್ಸ್, ಹೀಗೆ ಹತ್ತಾರು ಅಭಿವೃದ್ಧಿ ಮಾಡಿದ್ದೇವೆ. ಟೆಕ್ಸ್ಟೈಲ್ ಪಾರ್ಕ್ ಆಗಲಿದೆ. ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ರೈತರು ತಲೆಬಾಗಿಕೊಂಡು ಓಡಾಟ ಮಾಡುತ್ತಿದ್ದರು. ಬಿಜೆಪಿ ಸರ್ಕಾರ ಬಂದ ಮೇಲೆ ರೈತರು ತಲೆಎತ್ತಿ ಓಡಾಡುತ್ತಿದ್ದಾರೆ. ಐಟಿ ಹಬ್ ಹಿಂದಿನ ಕಾಲದ ನಳಂದ ವಿಶ್ವವಿದ್ಯಾಲಯ ನೆನಪಿಸುತ್ತಿದೆ. ಉತ್ತರ ಪ್ರದೇಶದಲ್ಲಿ ಜನರು ಇಷ್ಟು ಏಕೆ ಪ್ರೀತಿ ಮಾಡುತ್ತಾರೆ ಅಂದರೆ, ಇದು ಡಬಲ್ ಎಂಜಿನ್ ಸರ್ಕಾರದ ಸಾಧನೆ ಆಗಿದೆ. ರಾಮರಾಜ್ಯ ಕಲ್ಪನೆ ಉತ್ತರ ಪ್ರದೇಶದಲ್ಲಿ ಮತ್ತೆ ಡಬಲ್ ಎಂಜಿನ್ ಸರ್ಕಾರದಿಂದ ಆಗಿದೆ ಎಂದರು.
ರಾಯಚೂರು ವಿಮಾನ ನಿಲ್ದಾಣದ ಕಾಮಗಾರಿಯೂ ನಮ್ಮ ಕೊಡುಗೆ ಆಗಿದೆ. ಪಿಎಫ್ಐ ಸೊಕ್ಕನ್ನು ನಾವು ಮುರಿದಿದ್ದೇವೆ. ಈ ಪಿಎಫ್ಐ ಇನ್ನು ಮುಂದೆ ತಲೆನೇ ಎತ್ತುವುದೇ ಇಲ್ಲ. ಉತ್ತರ ಪ್ರದೇಶದಲ್ಲಿ ವಾಲ್ಮೀಕಿ ಜಯಂತಿ ದಿನ ಎಲ್ಲಾ ದೇವಸ್ಥಾನದಲ್ಲಿ ಪೂಜೆ ನಡೆಯುತ್ತದೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ನಡೆದಿದೆ. ರಾಮಮಂದಿರ ನಿರ್ಮಾಣ ಕಾರ್ಯ ಮುಗಿಯುತ್ತಾ ಬಂದಿದೆ. ಆ ಶುಭ ಕಾರ್ಯಕ್ಕೆ ನಿಮಗೆ ಕರೆಯಲು ನಾನು ಬಂದಿದ್ದೇನೆ. ಹೊಸ ಅಯೋಧ್ಯೆ ದರ್ಶನ ನಿಮಗೆ ಸಿಗಲಿದೆ. ರಾಮನೇ ಇಲ್ಲವೆಂದು ಹೇಳುವರೇ ಈಗ ರಾಮನ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.