ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಮತದಾನಕ್ಕೆ 9 ದಿನ ಮಾತ್ರ ಬಾಕಿಯಿದೆ. ಇದರ ನಡುವೆಯೇ ಸೋಮವಾರ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಪ್ರಜಾ ಪ್ರಣಾಳಿಕೆ ಹೆಸರಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಡಿವಿ ಸದಾನಂದಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಸೇರಿ ಹಲವು ನಾಯಕರು ಇದ್ದರು.
ಬಿಜೆಪಿಯ ಪ್ರಣಾಳಿಕೆ ರಚನೆ ವೇಳೆ ವಿಷಯ ತಜ್ಞರಿಂದ ಸುಮಾರು 900 ಸಲಹೆ ಬಂದಿದ್ದವು. ಜನರಿಂದ ಸುಮಾರು 6 ಲಕ್ಷ ಸಲಹೆ ಬಂದಿದ್ದವು ಎಂದು ಪ್ರಣಾಳಿಕೆ ಸಮಿತಿ ಸಂಚಾಲಕ ಹಾಗೂ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.
ಬಿಜೆಪಿ ಪ್ರಣಾಳಿಕೆಯ ಪ್ರಮುಖ ಅಂಶಗಳು!
ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ವಾರ್ಷಿಕ ಮೂರು ಉಚಿತ ಸಿಲಿಂಡರ್ ಗ್ಯಾಸ್ ವಿತರಣೆ (ಯುಗಾದಿ, ಗಣೇಶ ಚತುರ್ಥಿ, ದೀಪಾವಳಿ)
ಪ್ರತಿ ವಾರ್ಡ್‌ಗಳಲ್ಲಿ ಅಟಲ್ ಆಹಾರ ಕೇಂದ್ರ
ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಉಚಿತ ಹಾಲು, ಪ್ರತಿ ತಿಂಗಳು 5 ಕೆಜಿ ಸಿರಿ ಅನ್ನ, ಸಿರಿ ಧಾನ್ಯ ವಿತರಣೆ
ಏಕರೂಪ ನಾಗರಿಕ ಸಹಿತೆ ಜಾರಿ ಮಾಡುತ್ತೇವೆ
ಸರ್ವರಿಗೆ ಸೂರು ಯೋಜನೆ