ಮೈಸೂರು-ಕೊಡಗು ಸಂಸದರಾಗಿರುವ ಪ್ರತಾಪ್ ಸಿಂಹ ಅವರು ಕೋಮುದ್ವೇಷದ ಹೇಳಿಕೆ ನೀಡುತ್ತಾ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿದ್ದರಾಮಯ್ಯ ಸ್ವಜಾತಿಯವರನ್ನು ಎತ್ತಿಕಟ್ಟಿ ಬೇರೆ ಸಮುದಾಯದ ಮೇಲೆ ಗಲಾಟೆ ಮಾಡಿಸುತ್ತಿದ್ದಾರೆ ಎಂದು ಹೇಳಿಕೆ ನೀಡುವುದರ ಮೂಲಕ ಇತರ ಸಮಾಜದವರನ್ನು ಕುರುಬ ಸಮುದಾಯದ ವಿರುದ್ಧ ಎತ್ತಿಕಟ್ಟಿ ಗಲಾಟೆ ಮಾಡಿಸುವುದಕ್ಕೆ ಸಂಚು ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಾಗಿದೆ.
ಏನಿದು ಪ್ರಕರಣ – ವರುಣ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣ ವಿರುದ್ಧ ಕೆಲ ಕಾಂಗ್ರೆಸ್ ನಾಯಕರು ಪ್ರಚಾರಕ್ಕೆ ಅಡ್ಡಿಪಡಿಸಿದರು ಎಂದು ಪ್ರತಾಪ್ ಸಿಂಹ ಆರೋಪಿಸಿದ್ದರು. ಜೊತೆಗೆ ನೀವು ನಿಮ್ಮ ಜನರನ್ನು ಮುಂದೆ ಬಿಟ್ಟು ಈ ರೀತಿಯ ಕೆಲಸ ಮಾಡಿದ್ರೆ ನಾವು ಕೂಡ ಸುಮ್ಮನೆ ಇರಲ್ಲ ಎನ್ನುವ ಮೂಲಕ ಎಚ್ಚರಿಕೆ ರವಾನಿಸಿದ್ದಾರೆ.
ಪ್ರತಾಪ್ ಸಿಂಹ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಸದ್ಯ ಈ ಪ್ರಕರಣ ದೂರು ದಾಖಲಾಗಿದೆ