ಅದಾ ಶರ್ಮಾ ನಟಿಸಿರುವ ದಿ ಕೇರಳ ಸ್ಟೋರಿ ಸಿನಿಮಾ ಅಡೆತಡೆಗಳ ನಡುವೆಯೂ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ರಿಲೀಸ್ ಆದ ಐದೇ ದಿನಕ್ಕೆ 50 ಕೋಟಿ ರೂಪಾಯಿ ಬಾಚಿದೆ ಎಂಬ ಮಾಹಿತಿ ಸಿಕ್ಕಿದೆ. ಈ ನಡುವೆಯೇ ಚಿತ್ರತಂಡವು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ, ತಮ್ಮ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾಗಿ ಮಾಹಿತಿ ಹಂಚಿಕೊಂಡಿದ್ದಾರೆ
ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ ನಿರ್ದೇಶಕ ಸುದಿಪ್ತೊ ಸೇನ್, ನಿರ್ಮಾಪಕ ವಿಫುಲ್ ಅಮೃತ್ ಲಾಲ್ ಶಾ ಹಾಗೂ ನಟಿ ಅದಾ ಶರ್ಮ ಅವರಿಗೆ ಉತ್ತರ ಪ್ರದೇಶ ಸರಕಾರದಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು ಎಂದು ಆದಿತ್ಯನಾಥ್ ತಿಳಿಸಿದ್ದಾರೆ. ಹೀಗಾಗಿ ಚಿತ್ರತಂಡಕ್ಕೆ ಆನೆಬಲ ಬಂದಂತಾಗಿದೆ.
ಈ ಖುಷಿಯ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಚಿತ್ರತಂಡಕ್ಕೆ ಶಾಕ್ ಕೂಡ ನೀಡಿದೆ. ಪಶ್ಚಿಮ ಬಂಗಾಳ ನಿಷೇಧಿಸಿರುವುದು ಹಾಗೂ ತಮಿಳುನಾಡಿನಲ್ಲಿ ನಿಷೇಧಕ್ಕೆ ಮುಂದಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.