ಮೈಸೂರು : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತದಾನ ಪ್ರಕ್ರಿಯೆಯು ಮೇ 10ರಂದು ನಡೆದಿದ್ದು, ಜಿಲ್ಲೆಯಲ್ಲಿ ಒಟ್ಟು 11 ವಿಧಾನಸಭಾ ಕ್ಷೇತ್ರಗಳಿದ್ದು, ಮತ ಎಣಿಕೆಯು ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿದೆ.
ಮತಎಣಿಕೆ ಸಂಬಂಧ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು ಭದ್ರತಾ ಕೊಠಡಿಗೆ ಮೂರು ಸುತ್ತಿನ ಭದ್ರತೆ ಒದಗಿಸಲಾಗಿರುತ್ತದೆ. ಸಿ.ಎ.ಪಿ.ಎಫ್ ತುಕಡಿಯಿಂದ, ಸಶಸ್ತ್ರ ಮೀಸಲು ಪಡೆ ಹಾಗೂ ಸ್ಧಳೀಯ ಮೀಸಲು ಪಡೆಯಿಂದ ಭದ್ರತೆ ನೀಡಲಾಗಿದೆ.
ಒಟ್ಟಾರೆ ಮೈಸೂರು ಜಿಲ್ಲೆಯ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ನಾಳೆ ಹಣೆಬರಹ ನಿರ್ಧಾರವಾಗಲಿದೆ