ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿಯುವಲ್ಲಿ ಸಫಲವಾಗಿದೆ.
ಆಡಳಿತ ವಿರೋಧಿ ಅಲೆ, ಟಿಕೆಟ್ ಹಂಚಿಕೆ ಯಡಿಯೂರಪ್ಪ ರನ್ನು ಮೂಲೆ ಗುಂಪು ಮಾಡಿದ್ದಾರೆ ಎಂಬ ಆರೋಪಗಳೂ ಈ ಬಾರಿ ಬಿಜೆಪಿಗೆ ಮಗ್ಗುಲು ಮುಳ್ಳಗಿದೆ.
ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮೂರು ಪಕ್ಷಗಳು ಕೂಡ ಬಹಳಷ್ಟು ಸರ್ಕಸ್ ನಡೆಸಿದ್ದವು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೋಡೆಟ್ಟುಗಳಂತೆ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಿ ಬಿಜೆಪಿ ಸರ್ಕಾರದ ವೈಫಲ್ಯಗಳನ್ನ ಜನರ ಬಳಿ ತಲುಪಿಸುವಲ್ಲಿ ಯಶಸ್ವಿಯಾಗಿದ್ದು ಕಾಂಗ್ರೆಸ್ ಅಧಿಕಾರ ಹಿಡಿಯಲು ಕಾರಣವಾಗಿದೆ.