ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಖುರ್ಚಿ ಗುದ್ದಾಟಕ್ಕೆ ತೆರೆ ಬಿದ್ದಿದ್ದು ಬಹತೇಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದು ಖಚಿತವಾಗಿದೆ.
ಇಬ್ಬರ ವಾದ ವಿವಾದ ಆಲಿಸಿ ಹೈ ಕಮಾಂಡ್ ಕೊನೆಗೂ ತನ್ನ ನಿಲುವನ್ನು ತೆಗೆದುಕೊಂಡಿದೆ. ಸಿದ್ದರಾಮಯ್ಯ ರನ್ನು ಡಿಸಿಎಂ ಮಾಡುವುದಕ್ಕೆ ಆಗಲ್ಲ, ಮುಖ್ಯಮಂತ್ರಿ ಸ್ಥಾನ ಕೊಡಲಿಲ್ಲ ಅಂದ್ರೆ ರಾಜಕೀಯ ನಿವೃತ್ತಿ ಘೋಷಣೆ ಮಾಡೋದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ರಾಜ್ಯದ ಒಬ್ಬ ಮಾಸ್ ಲೀಡರ್ ಅನ್ನು ಪಕ್ಷ ಹೇಗೆ ನಡೆಸಿಕೊಂಡಿದೆ ಎಂಬುದನ್ನು ರಾಜ್ಯದ ಜನ ನೋಡುತ್ತಾರೆ ಯಡಿಯೂರಪ್ಪರನ್ನು ಬಿಜೆಪಿ ನಡೆಸಿಕೊಂಡ ರೀತಿಗೆ ರಾಜ್ಯದಲ್ಲಿ ಬಿಜೆಪಿ ಮಕಾಡೆ ಮಲಗಿದೆ.
ಎಲ್ಲವನ್ನು ಅಳೆದು ತೂಗಿ ಹೈ ಕಮಾಂಡ್ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಮಾಡಿ ಡಿಕೆಶಿ ಅವರನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೇಳುವ ಇಲಾಖೆಯನ್ನು ಕೊಡುವುದಾಗಿ ಭರವಸೆ ನೀಡಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಡಿಕೆ ಶಿವಕುಮಾರ್ ಎರಡನೇ ಅವಧಿಗೆ ಮುಖ್ಯಮಂತ್ರಿ ಮಾಡೋದಾಗಿ ಹೇಳಿದೆ ಎನ್ನಲಾಗಿದೆ.