ಮೈಸೂರು: ಕರ್ನಾಟಕ ರಾಜ್ಯ ರೈತ ಸಂಘದಿಂದ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿ ನಡೆಸಲಾಯಿತು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಡಗಲಪುರ ನಾಗೇಂದ್ರ , ಮೈಸೂರು ಜಿಲ್ಲೆಯ ಸಿದ್ದರಾಮಯ್ಯನವರು ಸಿಎಂ ಆಗಿರುವುದು ಖುಷಿಯ ವಿಷಯ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರು ರಾಜ್ಯದ ಒಳಿತಿಗಾಗಿ ಕೆಲಸ ಮಾಡಲಿ.
ಜೊತೆಗೆ ಸರ್ವೋದಯ ಕರ್ನಾಟಕ ಪಕ್ಷದಿಂದ ದರ್ಶನ್ ಪುಟ್ಟಣ್ಣಯ್ಯ ಶಾಸಕರಾಗಿ ಆಯ್ಕೆಯಾಗಿರುವುದು ಖುಷಿಯ ವಿಚಾರ.ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನ ನಂಬಿ ಸಂಪೂರ್ಣ ಬಹುಮತ ನೀಡಿದ್ದಾರೆ.
ಬಿಜೆಪಿ ಸರ್ಕಾರವನ್ನ ಜನತೆ ಕಿತ್ತೆಸೆದಿದ್ದಾರೆ ಎಂದರು.
ಇದರ ನಡುವೆ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿ.
ರೈತ ವಿರೋಧಿ ಕಾಯ್ದೆಗಳಾದ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ,ಎಪಿಎಂಸಿ ತಿದ್ದುಪಡಿ ಕಾಯ್ದೆ,ಜಾನುವಾರು ಹತ್ಯೆ ನಿಷೇಧ ಹಾಗೂ ಸಂರಕ್ಷಣ ಕಾಯ್ದೆಯನ್ನ ವಾಪಾಸ್ ಪಡೆಯಬೇಕು.ಕೇಂದ್ರ ಸರ್ಕಾರ ರೂಪಿಸಿರುವ ವಿದ್ಯುಚಕ್ತಿ ಕಾಯ್ದೆಯನ್ನ ರಾಜ್ಯದಲ್ಲಿ ಜಾರಿಗೆ ತರಬಾರದು.
ಡಾ ಸ್ವಾಮಿನಾಥನ್ ವರದಿ ಅನ್ವಯ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ದೊರೆಕಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು