ಮೈಸೂರು : ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ.ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ.ಸಿಎಂ ಬದಲಾವಣೆ ಬಗ್ಗೆ AICC ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ.
ಸಿದ್ದರಾಮಯ್ಯ ಮುಂದಿನ ಐದು ವರ್ಷವೂ ಸಿಎಂ ಆಗಲಿದ್ದಾರೆ ಎಂದು AICC ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಎಂ.ಬಿ ಪಾಟೀಲ್ ಹೇಳಿದ್ದಾರೆ.
ಬಿಜೆಪಿ ಅಧಿಕಾರವದಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ.ಪಿ ಎಸ್ ಐ, ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆ ಬಗ್ಗೆ ತನಿಖೆ ನಡೆಸುತ್ತೇವೆ.ಎಲ್ಲಾ ಹಗರಣಗಳನ್ನ ಲಾಜಿಕ್ ಎಂಡ್ ಗೆ ತೆಗೆದುಕೊಂಡು ಹೋಗುತ್ತೇವೆ.ತಪ್ಪಿಸ್ತರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದು ಹೇಳಿದರು.
ಗ್ಯಾರೆಂಟಿ ಕಾರ್ಡ್ ವಿಚಾರಕ್ಕೇ ಪ್ರತಿಕ್ರಿಯಿಸಿದ ಅವರು
ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಆಗಿದೆ, ತಾತ್ವಿಕ ಒಪ್ಪಿಗೆ ನೀಡಲಾಗಿದೆ ಈ ವಿಚಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದರು