24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ
ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ನಾಯಕರು ಕಾಂಗ್ರೆಸ್ ಪರ ಮತಪ್ರಚಾರ ಮಾಡಿದ್ದಕ್ಕಾಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸತ್ಯಜಿತ್ ಸುರತ್ಕಲ್ ವಿರುದ್ಧ ವಾಗ್ದಾಳಿ ನಡೆಸುವ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಮೇಲೆ ಕೊಲೆ ಆರೋಪ ಹೊರಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾರೆ.