ಮೈಸೂರು : ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಸಚಿವ ಸ್ಥಾನ ಆಯ್ಕೆ.
ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಸಮತೋಲನ.
ಲಿಂಗಾಯತ ಸಮುದಾಯಕ್ಕೆ ಒಟ್ಟು ಏಳು ಸಚಿವ ಸ್ಥಾನ. ಸಚಿವ ಸಂಪುಟ ಆಯ್ಕೆಯಲ್ಲಿ ಬಹುತೇಕ ಎಲ್ಲಾ ಸಮುದಾಯಗಳನ್ನು ಪರಿಗಣನೆ.
ಬಣಜಿಗರಲ್ಲಿ ಈಶ್ವರ್ ಖಂಡ್ರೆ, ಪಂಚಮಸಾಲಿಗಳಲ್ಲಿ ಲಕ್ಷ್ಮೀ ಹೆಬ್ಬಾಳ್‌ಕರ್ ಮತ್ತು ಶಿವಾನಂದ ಪಾಟೀಲ್.
ಕುರು ಒಕ್ಕಲಿಗರಲ್ಲಿ ಎಂ.ಬಿ.ಪಾಟೀಲ್,ಸಾದ ಲಿಂಗಾಯತರಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್. ಆದಿ ಬಣಜಿಗರಲ್ಲಿ ಶರಣ ಪ್ರಕಾಶ ಪಾಟೀಲ್ ರೆಡ್ಡಿಲಿಂಗಾಯತರಲ್ಲಿ ದರ್ಶನಾಪುರ.
ವೈಷ್ಣವ ರೆಡ್ಡಿಯ ಪ್ರತಿನಿಧಿಯಾಗಿ ಹೆಚ್.ಕೆ.ಪಾಟೀಲ್ ಗೆ ಪ್ರಾತಿನಿಧ್ಯ.
ಒಕ್ಕಲಿಗರಲ್ಲಿ ಗಂಗಟಕಾರ್ ಒಕ್ಕಲಿಗರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಚೆಲುವರಾಯಸ್ವಾಮಿ, ಕೆ.ವೆಂಕಟೇಶ್.
ಕುಂಚಟಿಗರು ದಾಸ ಒಕ್ಕಲಿಗರಲ್ಲಿ ಕೃಷ್ಣ ಬೈರೇಗೌಡ ಸೇರಿ ನಾಲ್ಕು ಮಂದಿಗೆ ಪ್ರಾತಿನಿಧ್ಯ.
ದಲಿತ ಸಮುದಾಯಕ್ಕೆ ಬರೋಬ್ಬರಿ 9 ಸಚಿವ ಸ್ಥಾನ. ಕೆ ಹೆಚ್ ಮುನಿಯಪ್ಪ, ಜಿ.ಪರಮೇಶ್ವರ್, ಹೆಸ್.ಸಿ.ಮಹದೇವಪ್ಪ, ಆರ್ ಬಿ ತಿಮ್ಮಾಪುರ ಮತ್ತು ಪ್ರಿಯಾಂಕ್ ಖರ್ಗೆಗೆ ಸ್ಥಾನ.
ಪರಿಶಿಷ್ಟ ಪಂಗಡದ ಪ್ರತಿನಿಧಿಗಳಾಗಿ ನಾಗೇಂದ್ರ, ಮಧುಗಿರಿ ರಾಜಣ್ಣ,ಸತೀಶ್ ಜಾರಕಿಹೊಳಿಗೆ ಅವಕಾಶ. ವಿಧಾನ ಪರಿಷತ್ ಮುಖ್ಯ ಸಚೇತಕರಾಗಿರುವ ಪ್ರಕಾಶ್ ರಾಥೋಡ್ ಕೂಡ ಬಂಜಾರ ಸಮುದಾಯ.
ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯ ರಜಪೂತರಾದ ಅಜಯ್‌ಸಿಂಗ್, ರಾಜು.
ಕ್ಷತ್ರಿಯ ಸಮುದಾಯದ ಬೋಸರಾಜು.
ಅತ್ಯಂತ ಸಣ್ಣ ಹಿಂದುಳಿದ ಸಮುದಾಯಗಳಲ್ಲಿ ಒಂದಾದ ಬೆಸ್ತ ಸಮುದಾಯದ ಮಾಂಕಾಳ ವೈದ್ಯ.
ಮರಾಠ ಸಮಾಜದಿಂದ ಸಂತೋಷ್ ಲಾಡ್ ಗೆ ಸ್ಥಾನ ಕುರುಬ ಸಮುದಾಯದ ಬೈರತಿ ಸುರೇಶ್ ಗೆ ಒಲಿದ ಸಚಿವ ಸ್ಥಾನ.
ಬಿಲ್ಲವ ಸಮುದಾಯದಿಂದ ಮಧು ಬಂಗಾರಪ್ಪ.
ಮುಸ್ಲಿಂ ಸಮುದಾಯದಿಂದ ಜಮೀರ್ ಅಹಮದ್ ಖಾನ್, ರಹೀಂ ಖಾನ್ ಗೆ ಅವಕಾಶ.
ಯು.ಟಿ.ಖಾದರ್ ಸ್ಪೀಕರ್ ಸ್ಥಾನ.
ಕ್ರೈಸ್ತ ಸಮುದಾಯದಿಂದ ಕೆ.ಜೆ.ಜಾರ್ಜ್ ಗೆ ಒಲಿದ ಸಚಿವ ಸ್ಥಾನ.
ಜೈನ ಸಮುದಾಯ ಡಿ.ಸುಧಾಕರ್ ಹಾಗೂ ಬ್ರಾಹ್ಮಣ ಸಮುದಾಯದ ಪ್ರತಿನಿಧಿಯಾಗಿ ದಿನೇಶ್ ಗುಂಡೂರಾವ್ ಗೆ ದೊರೆತ ಸಚಿವ ಸ್ಥಾನ.
ಕಿತ್ತೂರು ಕರ್ನಾಟಕ,ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೂ ಪ್ರಾತಿನಿಧ್ಯ.
ಮಲೆನಾಡು,ಕರಾವಳಿ ಕರ್ನಾಟಕ ಮತ್ತು ಮೈಸೂರು ಕರ್ನಾಟಕ ಹಾಗೂ ಮಧ್ಯ ಕರ್ನಾಟಕಕ್ಕೆ ಸಿಕ್ಕಿರುವ ಪ್ರಾತಿನಿಧ್ಯ.
ಜಾತಿವಾರು ಲೆಕ್ಕಾಚಾರವನ್ನು ಸರಿದೂಗಿಸಿದ ಸಿಎಂ ಸಿದ್ದರಾಮಯ್ಯ.