ಮೈಸೂರು : ಸಾಲಭಾದೆ ತಾಳದೆ
ಮೈಸೂರು ಜಿಲ್ಲೆಯಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಸುರೇಶ್ (58) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹುಣಸೂರು ತಾಲ್ಲೂಕು ಶ್ಯಾನಭೋಗನಹಳ್ಳಿಯಲ್ಲಿ ಘಟನೆ ನಡೆದಿದೆ.ಎರಡು ಎಕರೆ ಜಮೀನು ಹೊಂದಿದ್ದ ಸುರೇಶ್ ಬ್ಯಾಂಕ್ ಸೊಸೈಟಿ ಸೇರಿ 7 ಲಕ್ಷ ಸಾಲ ಮಾಡಿದ್ದರು.ಬೆಳೆ ಕೈ ಕೊಟ್ಟ ಹಿನ್ನೆಲೆ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಹುಣಸೂರಿನ
ಕರ್ಣಕುಪ್ಪೆ ಗ್ರಾಮದ ರಾಜಶೆಟ್ಟಿ (78) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.5 ಎಕರೆ ಜಮೀನು ಹೊಂದಿದ್ದ ರಾಜಶೆಟ್ಟಿತಂಬಾಕು ರಾಗಿ ಬೆಳೆ ಬೆಳೆದಿದ್ದರು.
ಬ್ಯಾಂಕ್ ಸೊಸೈಟಿ ಮಹಿಳಾ ಸಂಘ ಕೈ ಸಾಲ ಸೇರಿ ಸುಮಾರು 8 ಲಕ್ಷ ಸಾಲ ಮಾಡಿದ್ದರು.
ಸಾಲ ತೀರಿಸಲಾಗದೆ ಹೆಚ್ಚಾಗಿದ್ದ ಬಡ್ಡಿಯಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.