ಮಂಡ್ಯ : ಚಲಿಸುತ್ತಿದ್ದ ರೈಲಿನಲ್ಲೆ ಮೂರ್ಛೆ ರೋಗಿಯೊಬ್ಬ ನರಳಿ ನರಳಿ ಪ್ರಾಣ ಬಿಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ.
ಮೈಸೂರಿನ ರಮಾಬಾಯಿ ನಗರದ ನಿವಾಸಿ ಸ್ವಾಮಿ( 83) ಸಾವನ್ನಪ್ಪಿದ ದುರ್ದೈವಿ.ನಿನ್ನೆ ಸಂಜೆ ಮೈಸೂರಿನಿಂದ ಬೆಂಗಳೂರಿಗೆ ಪ್ಯಾಸೇಂಜರ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದುರ್ಘಟನೆ ನಡೆದಿದೆ.ಮೈಸೂರಿನಲ್ಲಿ ರೈಲು ಹತ್ತುತ್ತಿದ್ದಂತೆ ಮೂರ್ಛೆ ಬಂದು ಕುಸಿದು ಬಿದ್ದಿದ್ದರು.ಸಹ ಪ್ರಯಾಣಿಕರು ಮೈಸೂರಿನಲ್ಲೆ ರೈಲ್ವೆ ಪೊಲೀಸರಿಗೆ, ಸಿಬ್ಬಂದಿಗೆ ಮಾಹಿತಿ ನೀಡಿದ್ದರು.
ಮಾಹಿತಿ ಕೊಟ್ಟರು ಸಿಬ್ಬಂದಿಗಳು ಚಿಕಿತ್ಸೆ ಕೊಡಿಸುವಲ್ಲಿ ವಿಳಂಬ ಮಾಡಿದ್ದಾರೆ.
ಮೈಸೂರಿನಿಂದ ಮಂಡ್ಯ ವರೆಗು ಎಲ್ಲಿಯು ಚಿಕಿತ್ಸೆ ದೊರೆತಿಲ್ಲ.
ರೈಲಿನಲ್ಲಿ ಮಂಡ್ಯ ಸಮೀಪ ಬರುತ್ತಿದ್ದಂತೆಯೇ ಸ್ವಾಮಿ ಸಾವನ್ನಪ್ಪಿದ್ದಾರೆ.
ರೈಲಿನ ಎಲ್ಲ ನಿಲ್ದಾಣದಲ್ಲಿಯು ರೈಲ್ವೆ ಪೊಲೀಸರಿಗು ತಿಳಿಸಿದ್ರು ಚಿಕಿತ್ಸೆ ಕೊಡಿಸಲಿಲ್ಲ ಎಂದು ಪ್ರಯಾಣಿಕರ ಆರೋಪ ಮಾಡಿದ್ದಾರೆ.
ರೈಲ್ವೆ ಅಧಿಕಾರಿಗಳು, ಪೊಲೀಸರ ನಿರ್ಲಕ್ಷಕ್ಕೆ ಸಾವಿಗೆ ಕಾರಣ ಎಂದ ಸಹ ಪ್ರಯಾಣಿಕರು ದೂರಿದ್ದಾರೆ.
ಮಂಡ್ಯದಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನ ವಾರಸುದಾರರಿಗೆ ಒಪ್ಪಿಸಲಾಗಿಧ.
ಮಂಡ್ಯ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.