ಮೈಸೂರು: ಖಾಸಗಿ ಬಸ್ ಹಾಗೂ ಇನ್ನೋವಾ ನಡುವೆ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಕೊಳ್ಳೇಗಾಲದ ತಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ್ ಪೋಲ್ ಬಳಿ ನಡೆದ ದುರ್ಘಟನೆಯಲ್ಲಿ ಬಳ್ಳಾರಿ ಮೂಲದ 8 ಮಂದಿ ಮಂದಿ ಹಾಗೂ ಬಸ್‌ನಲ್ಲಿದ್ದ ತಾಯಿ ಮಗು ಮೃತಪಟ್ಟಿದ್ದರು.
ಪ್ರಧಾನಮಂತ್ರಿಯವರು ಮೈಸೂರು ಮತ್ತು ಧನ್‌ಬಾದ್‌ನಲ್ಲಿ ಸಂಭವಿಸಿದ ದುರಂತಗಳಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಪಿಎಂಒ ಕೇರ್ ನಿಂದ ತಲಾ 2 ಲಕ್ಷ ರೂ. ಗಾಯಾಳುಗಳಿಗೆ ತಲಾ ರೂ. 50 ಸಾವಿರ ರೂಪಾಯಿ ಕೊಡುವುದಾಗಿ ಘೋಷಣೆ ಮಾಡಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಇನ್ನು ರಾಷ್ಟçಪತಿ ದ್ರೌಪದಿ ಮುರ್ಮು ಅವರು ಕೂಡ ಮೈಸೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಕ್ಕಳೂ ಸೇರಿದಂತೆ 10 ಮಂದಿ ಮೃತಪಟ್ಟಿದ್ದರ ಬಗ್ಗೆ ತಿಳಿದು ಮನಸ್ಸಿಗೆ ತುಂಬಾ ನೋವಾಯಿತು. ಮೃತರ ಕುಟುಂಬಗಳಿಗೆ ಆ ದೇವರು ಅವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಜತೆಗೆ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.