ಮೈಸೂರು : ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಛೇರಿಗಳ ಮೇಲೆ ದಾಳಿ ಮಾಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇರೆಗೆ ದಾಳಿ ನಡೆಸಲಾಗಿದ್ದು ಆದಾಯದ ಮೂಲ, ಆಸ್ತಿ ಪತ್ರಗಳು, ಬ್ಯಾಂಕ್ ವಿವರಗಳ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರಿನ ನಿವೇದಿತಾ ನಗರದ ಸಂಕ್ರಾಂತಿ ವೃತ್ತದ ಬಳಿ ಇರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ನಿವಾಸದ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೋಟದ ಮನೆ ಸೇರಿ ಹಲವು ಕಡೆ ಒಟ್ಟು 13 ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ಮಾಡಿ ಕಾರ್ಯಾಚರಣೆ ನಡೆಸಿದೆ. ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.