ಮೈಸೂರು : ಮಹಿಳಾ ಕುಸ್ತಿ ಪಟುಗಳ ಮೇಲಿನ ಲೈಂಗಿಕ ಕಿರುಕುಳ ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಧರಣಿ ನಡೆಸಲಾಯಿತು.
ಸಂಯುಕ್ತ ಹೋರಾಟ ಕರ್ನಾಟಕ ಸಂಘದಿಂದ ಪ್ರತಿಭಟನೆ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಹಲೋ ಮಿಸ್ಟರ್ ಮೋದಿ ನೀವು ಹೇಳಿದ್ದೇನು ಮಾಡಿದ್ದೇನು ? ಹೇಳಿದ್ದು ಬೇಟಿ ಪಡವೋ ಬೇಟಿ ಬಚಾವೋ ಮಾಡಿದ್ದು ಅತ್ಯಾಚಾರಿಗಳ ರಕ್ಷಣೆ ಎಂದು ಕಿಡಿಕಾರಿದರು.
ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಗಿಂಗ ಕಿರುಕುಳ ನೀಡಿದ್ದಾರೆ. Wfi ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಬೇಕು ಅಲ್ಲದೆ ಫೆಡರೇಶನ್ ಅನ್ನು ವಜಾಗೊಳಿಸಬೇಕು ಎಂದರು.
ಪ್ರಧಾನಿ ಮೋದಿ ಬಿಜೆಪಿ ಸಂಸದರ ರಕ್ಷಣೆಗೆ ನಿಂತಿದ್ದಾರೆ ಈ ಕೂಡಲೇ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕು ಇದರ ಹಿಂದೆ ಯಾರೇ ಇದ್ದರೂ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಇದರ ನೇರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಅಧ್ಯಕ್ಷ ಬಡಗಳಪುರ ನಾಗೇಂದ್ರ ಪ್ರೊ.ಭಗವಾನ್ ಸಾಮಾಜಿಕ ಹೋರಾಟಗಾರ್ತಿ ರತಿರಾವ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು