ಮೈಸೂರು : ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಗೆ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಭೇಟಿ ನೀಡಿ ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿದ್ದಾರೆ.
ಪಿರಿಯಾಪಟ್ಟಣ ಶಾಸಕ ಕೆ ವೆಂಕಟೇಶ್ ಸಚಿವರಾದ ನಂತರ ಮೊದಲ ಬಾರಿ ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜೊತೆಗೆ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಹಮ್ಮಿಕೊಂಡಿದ್ಧ ಸಮಾರಂಭದಲ್ಲಿ ಎಂಎಲ್ಸಿ ಎಚ್ ವಿಶ್ವನಾಥ್ ಭಾಗಿಯಾಗಿದ್ದಾರೆ.
ಆರು ವರ್ಷಗಳ ಸುದೀರ್ಘ ಅವಧಿಯ ಬಳಿಕ ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಗೆ ಎಚ್ ವಿಶ್ವನಾಥ್ ಬೇಟಿ ನೀಡಿದ್ದು ಕುತೂಹಲಕ್ಕೆ ಕಾರಣರಾದರು. ಆರು ವರ್ಷದ ಹಿಂದೆ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಎಚ್ ವಿಶ್ವನಾಥ್ ಸೇರ್ಪಡೆಯಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಎಂಎಲ್ಸಿ ಯಾಗಿದ್ದಾರೆ.
ಆದರೆ ಮತ್ತೊಮ್ಮೆ ಕಾಂಗ್ರೆಸ್ ನತ್ತ ಮುಖ ಮಾಡಿದ್ಧ ಎಚ್ ವಿಶ್ವನಾಥ್ ಇಂದು ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗಿಯಾದರು.