ತಿ.ನರಸೀಪುರ : ನರಸೀಪುರದಲ್ಲಿ ಮತ್ತೆ ಚಿರತೆ ಹಾವಳಿ ಹೆಚ್ಚಾಗಿದ್ದು, ಕಳೆದ ಒಂದು ತಿಂಗಳ ಅಂತರದಲ್ಲಿ 2 ಚಿರತೆಗಳು ಬೋನಿಗೆ ಬಿದ್ದಿವೆ.
ಇದೀಗ ಮತ್ತೆ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿರುವ ಚಿರತೆಗಳು ಜನರಲ್ಲಿ ಭಯದ ವಾತಾವರಣ ಉಂಟು ಮಾಡಿದೆ.ಅಲ್ಲದೆ
ಒಡ್ಗಲ್ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ತಾಲ್ಲೂಕಿನ ಬಿ.ಬೆಟ್ಟಹಳ್ಳಿ ಗ್ರಾಮದಲ್ಲಿರುವ ದೇವಸ್ಥಾನದಲ್ಲಿ ತಡರಾತ್ರಿ ಚಿರತೆ ಕಾಣಿಸಿಕೊಂಡಿದೆ.
ದೇವಸ್ಥಾನದ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದ್ದು
ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.