ತಿ.ನರಸೀಪುರ : ಅಂಗಡಿ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ನರಸೀಪುರ ತಾಲ್ಲೂಕಿನ ಬನ್ನೂರಿನಲ್ಲಿ ನಡೆದಿದೆ.
ಬನ್ನೂರಿನ ಸಂತೆಮಾಳ ಸಮೀಪವಿರುವ ಶ್ರೀರಂಗ ಫ್ರೂಟ್ ಸ್ಟಾಲ್ ನಲ್ಲಿ ಈ ಘಟನೆ ನಡೆದಿದ್ದು, ರಂಗಸ್ವಾಮಿ ಎಂಬುವರಿಗೆ ಸೇರಿದ ಅಂಗಡಿಯಲ್ಲಿ ಕಳ್ಳತನವಾಗಿದೆ.
ಅಂಗಡಿ ಬೀಗ ಮುರಿದು ಅಂಗಡಿಯಲ್ಲಿದ್ದ ನಗದು ಮತ್ತು ಇತರೆ ವಸ್ತುಗಳನ್ನು ಕಳ್ಳರು ಕದ್ದೋಯ್ದಿದ್ದಾರೆ.
ಇನ್ನು ಸ್ಥಳಕ್ಕೆ ಬನ್ನೂರು ಪೋಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.ಕಳ್ಳರನ್ನ ಪತ್ತೆ ಹಚ್ಚುವಂತೆ ಅಂಗಡಿ ಮಾಲೀಕ ರಂಗಸ್ವಾಮಿ ಒತ್ತಾಯ ಮಾಡಿದ್ದು,
ಬನ್ನೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ