ಮೈಸೂರು : ಜನಶಕ್ತಿ ಮುಂದೆ ಯಾವುದು ದೊಡ್ಡದಲ್ಲ.
ಜನ ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡುತ್ತಾರೆ.ಇದಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ಮಾಜಿ ಶಾಸಕ ಯತಿಂದ್ರ ಸಿದ್ದರಾಮಯ್ಯ ಹೇಳಿದರು.
ಕೇಂದ್ರ ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಇದ್ದವು.
ಆದರೂ ಜನರು ಬಿಜೆಪಿ ಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಮಟ್ಟದ ಗೆಲುವು ತಂದುಕೊಟ್ಟಿದ್ದಾರೆ.
ಕೆಲಸ ಮಾಡದ ಬಿಜೆಪಿಯವರನ್ನು ಮನೆಗೆ ಕಳಿಸಿದ್ದಾರೆ.
ಕೇಂದ್ರದಲ್ಲಿ ಒಂಬತ್ತು ವರ್ಷದಿಂದ ಅಧಿಕಾರದಲ್ಲಿರುವ ಬಿಜೆಪಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿಲ್ಲ.
ರಾಜ್ಯದಲ್ಲೂ ಬಿಜೆಪಿ ದುರಾಡಳಿತ ನಡೆಸಿತು.
ನಾವು ನುಡಿದಂತೆ ನಡೆದಿದ್ದೇವೆ.
ಹೀಗಾಗಿ ಕಾಂಗ್ರೆಸ್ ಗೆ ಜನ ಬೆಂಬಲ ನೀಡಿದ್ದಾರೆ.
ಅಧಿಕಾರಕ್ಕೆ ಬಂದಿರುವ ನಾವು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ.
ಜನರ ಮನದಲ್ಲಿ ಉಳಿಯುವಂತೆ ಅಧಿಕಾರ ನಡೆಸುತ್ತೇವೆ ಎಂದು ವರುಣ ಕ್ಷೇತ್ರದಲ್ಲಿ ನಡೆದ ಕಾಂಗ್ರೆಸ್ ಕೃತಜ್ಞತೆ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಹಾಗು ಮಾಜಿ ಶಾಸಕ ಡಾ ಯತೀಂದ್ರ ಹೇಳಿದರು