ಮೈಸೂರು : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಮೈಸೂರಿನ ಜಿಲ್ಲಾ ಪಂಚಾಯತಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ವಿದ್ಯುತ್ ದರ ಹೆಚ್ಚಳ, ಅನ್ನಭಾಗ್ಯ ಅಕ್ಕಿ ವಿತರಣೆ ವಿಳಂಬ ಹಿನ್ನಲೆ ಗೊಂದಲದ ಗ್ಯಾರೆಂಟಿಗಳ ವಿರುದ್ಧ ಹೋರಾಟಕ್ಕೆ ಮುಂದಾದ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ಮಾಜಿ ಶಾಸಕ ಎಲ್ ನಾಗೇಂದ್ರ ಮತ್ತು ಶಾಸಕ ಶ್ರೀವತ್ಸ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸಿದ್ದರಾಮಯ್ಯ ನವರ ವಿರುದ್ಧ ಆಕ್ರೋಶ ಹೊರ ಹಾಕಿದರು.
ಕೇಂದ್ರ ಸರ್ಕಾರದ 5 ಕೆ ಜಿ ಜೊತೆ 10 ಕೆ ಜಿ ಸೇರಿಸಿ 15 ಕೆ ಜಿ ಅಕ್ಕಿ ಕೊಡಿ ಅದನ್ನು ಬಿಟ್ಟು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದನ್ನು ಬಿಡಿ ಎಂದರು. ಅಲ್ಲದೆ
ಸಿದ್ದರಾಮಯ್ಯ ಅಂದ್ರೆ ಸುಳ್ಳುಗಾರ, ಮೋಸಗಾರ ಎಂದು ಘೋಷಣೆ ಕೂಗಿದರು.