ಮೈಸೂರು : ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯದ ವತಿಯಿಂದ ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯದ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು.
ಜುಲೈ 2 ರಂದು ವಿಶ್ವ ವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವ ಹಿನ್ನಲೆಯಲ್ಲಿ ಮೈಸೂರಿನ ಘಟಿಕೋತ್ಸವ ಭವನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಈ ಬಾರಿ ಮೂವರಿಗೆ ಮುಕ್ತ ವಿಶ್ವ ವಿದ್ಯಾನಿಲಯ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಅದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮರಿಗೆ ಮೈಸೂರು ಗೌರವ ಡಾಕ್ಟರೇಟ್ ಪ್ರದಾನ ಮಾಡಲು ನಮ್ಮ ವಿವಿ ಹೆಮ್ಮೆ ಪಡುತ್ತದೆ.
ಶಿಕ್ಷಣತಜ್ಞರಾದ ಎನ್.ರಾಮಚಂದ್ರಯ್ಯ,ವೆಂಕಟ ಲಕ್ಷ್ಮಿ ನರಸಿಂಹರಾಜು ಅವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.ಈ ಬಾರಿ ಒಬ್ಬ ಮಹಿಳೆಗೆ ರಾಜ್ಯ ಶಾಸ್ತ್ರದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ.
ಸ್ನಾತಕೋತ್ತರ ದಲ್ಲಿ 7057 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಸ್ನಾತಕ ಪದವಿಯಲ್ಲಿ 1664 ತೇರ್ಗಡೆಯಾಗಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಕುಲಪತಿ ಗಳಾದ ಪ್ರೊ.ಶರಣಪ್ಪ ವಿ ಹಲಸೆ ಮಾಹಿತಿ ನೀಡಿದ್ದಾರೆ.