ಮೈಸೂರು : ಕಾಂಗ್ರೆಸ್-ಬಿಜೆಪಿ ನಡುವೆ ಪಂಚೆ ರಾಜಕೀಯ ಮುನ್ನೆಲೆಗೆ ಬಂದಿರುವ ವಿಚಾರಕ್ಕೇ ಸಚಿವ ಚೆಲುವರಾಯಸ್ವಾಮಿ ಸಿಟಿ ರವಿಗೆ ಟಾಂಗ್ ಕೊಟ್ಟಿದ್ದಾರೆ.
ಮೊದಲು ಸಿ ಟಿ ರವಿ ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ.
ಸಿದ್ದು, ಡಿಕೆಶಿ ಪಂಚೆ ಬಗ್ಗೆ ಮಾತಾಡಿರುವ ಸಿ ಟಿ ರವಿಗೆ ಸಚಿವ ಚಲುವರಾಯಸ್ವಾಮಿ ಟಾಂಗ್.
ಚುನಾವಣೆಯಲ್ಲಿ ಈ ರೀತಿ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ.
65 ಸ್ಥಾನಕ್ಕೆ ಕುಸಿದಿರುವ ಅವರಲ್ಲಿ ಕಚ್ಚಾಟ ಇಲ್ವಾ.
ನಮ್ಮಲ್ಲಿ ಡಿಕೆಶಿ, ಸಿದ್ದರಾಮಯ್ಯ ಏನು ಕಿತ್ತಾಡುತ್ತಿದ್ದಾರಾ?
ಸುಮ್ಮನೇ ಅವರೇ ಕಲ್ಪಿಸಿಕೊಂಡು ಮಾತಾನಾಡುತ್ತಾರೆ.
ಮನಸ್ಸಿಗೆ ಬಂದಂತೆ ಮಾತನಾಡಿದವರನ್ನು ಜನರು ಮಲಗಿಸಿದ್ದಾರೆ ಎಂದರು.
ಅದರಲ್ಲಿ ಒಬ್ಬರು ಇಬ್ಬರು ಉಳಿದುಕೊಂಡಿದ್ದಾರೆ.
ಜನ ಈಗಾಗಲೇ ಉತ್ತರ ಕೊಟ್ಟಿದ್ದಾರೆ.
ನಮ್ಮ ಪಂಚೆ ಸರಿ ಮಾಡೋದು ಬೇಡ.
ಮೊದಲು ಅವರ ಪಂಚೆ ಸರಿ ಮಾಡಿಕೊಳ್ಳೋಕೆ ಹೇಳಿ.
ದಿನ ಬೆಳಗಾದ್ರೆ ಜೆಡಿಎಸ್ ಬಿಜೆಪಿಯವರು ಏನೇನೋ ಮಾತನಾಡಿ ಪ್ರಚಾರ ತೆಗೆದುಕೊಳ್ಳೋಕೆ ನೋಡುತ್ತಾರೆ.
ಗ್ಯಾರಂಟಿ ಯೋಜನೆಗಳು ಜಾರಿ ಆಗೋದೇ ಇಲ್ಲ ಅಂತ ಎರಡೂ ಪಕ್ಷ ಹೋರಾಟ ಮಾಡಿದೊ.
ದೇಶದ ಇತಿಹಾಸದಲ್ಲೇ ಯಾವುದೇ ಸರ್ಕಾರ ಈ ರೀತಿ ಮಾಡಿದೆಯಾ ಎಂದರು.
ಜುಲೈ 5 ರಿಂದ ಯಡಿಯೂರಪ್ಪ ಧರಣಿ ಆರಂಭಿಸುವ ವಿಚಾರಕ್ಕೇ ಪ್ರತಿಕ್ರಿಯಿಸಿ ಯಡಿಯೂರಪ್ಪಗೆ ಸ್ವಾಗತ ಕೋರಿ
ಯಡಿಯೂರಪ್ಪ, ಬೊಮ್ಮಾಯಿ, ಸಾಮ್ರಾಟ್ ಅಶೋಕ್, ಸಿ ಟಿ ರವಿ ಎಲ್ಲರೂ ಬಂದು ಹೋರಾಟ ಮಾಡಲಿ ಅವರ ಹೋರಾಟವನ್ನು ಸ್ವಾಗತಿಸುತ್ತೇನೆ ಎಂದರು.