ಮೈಸೂರು: ಪಕ್ಷ ಸೂಚಿಸಿದರೇ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡಬೇಕು ಎಂದು ಬೆಂಬಲಿಗರ ಒತ್ತಾಯ ಹಿನ್ನೆಲೆ ಈ ಕುರಿತು ಡಾ. ಯತೀಂದ್ರ ಸಿದ್ದರಾಮಯ್ಯ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷ ಸೂಚಿಸಿದರೆ ಆದೇಶ ಪಾಲಿಸಲು ಸಿದ್ದ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನಾನಾಗಲಿ ತಂದೆಯವರಾಗಲಿ ಚರ್ಚೆ ನಡೆಸಿಲ್ಲ. ಚುನಾವಣೆಗೆ ಇನ್ನು 8 ತಿಂಗಳ ಕಾಲಾವಕಾಶ ಇದೆ. ಚುನಾವಣೆ ಸಮೀಪ ಯಾರು ಸೂಕ್ತ ಅಭ್ಯರ್ಥಿ ಎಂದು ಗೊತ್ತಾಗಲಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು ಅಷ್ಟೇ ಆದ್ದರಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುತ್ತೇವೆ. ಒಂದು ವೇಳೆ ನಾನು ಸ್ಪರ್ಧೆ ಮಾಡಬೇಕು ಎಂದು ಪಕ್ಷ ಸೂಚನೆ ನೀಡಿದರೇ ಪಾಲನೆ ಮಾಡಬೇಕಾಗುತ್ತದೆ ಎಂದರು.