ತಿ.ನರಸೀಪುರ : ಚಾಲಕನ ನಿಯಂತ್ರಣ ತಪ್ಪಿ ಟಾಟಾ ಎಸ್ಬ್ಬಹಾನ ಗದ್ದೆಗೆ ಉರುಳಿದ ಘಟನೆ ತಾಲೂಕಿನ ಕುಳ್ಳನಕೊಪ್ಪಲು ಗ್ರಾಮದ ಬಳಿ ನಡೆದಿದೆ.
10ಕ್ಕೂ ಹೆಚ್ಚು ಮಹಿಳೆಯರಿಗೆ ಗಂಭೀರ ಗಾಯಗಳಾಗಿವೆ.
ಪ್ರತಿದಿನ ನರಸೀಪುರ ಶಾಹಿ ಗಾರ್ಮೆಂಟ್ಸ್ ಮಹಿಳಾ ನೌಕರರನ್ನ ಕರೆದೋಯುತ್ತಿದ್ದ ಟಾಟಾ ಏಸ್ ವಾಹನ
ಗಾಯಾಳುಗಳಿಗೆ ಬನ್ನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.
ಈ ಪೈಕಿ ಮೂವರು ಮಹಿಳೆಯರಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ ಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಬನ್ನೂರು ಪೋಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಬನ್ನೂರು ಸಾರ್ವಜನಿಕ ಆಸ್ಪತ್ರೆ ಮುಂಭಾಗ ಕುಟುಂಬಸ್ಥರ ಕಣ್ಣೀರು ಹಾಕಿದ್ದಾರೆ.