ತಿ.ನರಸೀಪುರ : ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಬಲೆಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಲವು ದಿನಗಳಿಂದ ಗ್ರಾಮದ ಸುತ್ತಮುತ್ತ ಚಿರತೆ ಕಾಣಿಸಿಕೊಳ್ಳುತ್ತಿತ್ತು, ಈ ಹಿನ್ನಲೆ
ಚಿರತೆ ಹಾವಳಿಗೆ ಗ್ರಾಮಸ್ಥರು ಬೇಸತ್ತಿದ್ದರು
ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಕೂಡ ಮಾಡಿದ್ದರು.
ಬೊಮ್ಮನಹಳ್ಳಿ ಗ್ರಾಮದ ರಾಜಣ್ಣ ಎಂಬುವರ ಜಮೀನಿನಲ್ಲಿ ಬೋನು ಇರಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳು.ಇಂದು ಬೆಳ್ಳಂ ಬೆಳಗ್ಗೆ ಬೋನಿಗೆ ಬಿದ್ದಿರುವ 6ವರ್ಷದ ಗಂಡು ಚಿರತೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ
ಚಿರತೆ ಸ್ಥಳಾಂತರಕ್ಕೆ ಸಿಬ್ಬಂದಿಗಳು ಮುಂದಾಗಿದ್ದು
ಚಿರತೆ ಸೆರೆಯಿಂದ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.