ಬೆಂಗಳೂರು : ಐಷಾರಾಮಿ ಜೀವನಕ್ಕಾಗಿ ಲಾರಿಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 1.5 ಕೋಟಿ ರೂ. ಮೌಲ್ಯದ ಮೂರು ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಸಾವಿರಕ್ಕೂ ಅಧಿಕ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಲಾಗಿದೆ. ಉಳಿದ ಇಬ್ಬರು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಉಳಿದ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ