ಮೈಸೂರು : ಆಷಾಢ ಮಾಸದ ಕೊನೆಯ ಶುಕ್ರವಾರದ ಹಿನ್ನಲೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ.
ಕೊನೆಯ ಆಷಾಢ ಶುಕ್ರವಾರವಾದ ಕಾರಣ ನಾಡ ಅದಿ ದೇವತೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ.
ಮುಂಜಾನೆಯಿಂದಲೇ 3 ಗಂಟೆಯಿಂದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆಯನ್ನು ಮಾಡಲಾಗಿದೆ.
ವಿಶೇಷ ಅಲಾಂಕರದಿಂದ ಕಂಗೊಳಿಸುತ್ತಿರುವ ನಾಡ ಅದಿ ದೇವತೆ ಚಾಮುಂಡಿ ದೇವಿ ಕಂಗೊಳಿಸುತ್ತಿದ್ದು,
ದೇವಾಲಯದ ಆವರಣದಲ್ಲಿ ವಿವಿಧ ಹೂಗಳಿಂದ ಅಲಾಂಕರ ಮಾಡಲಾಗಿದೆ.
5.30 ರಿಂದ ಭಕ್ತರಿಗೆ ಚಾಮುಂಡಿ ತಾಯಿಗೆ ಅವಕಾಶ ಮಾಡಿಕೊಡಲಾಗಿದೆ.ಚಾಮುಂಡಿ ತಾಯಿಗೆ ಮುಂಜಾನಯೇ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ನಂತರ ಮಹಾಮಂಗಳಾರತಿಯನ್ನು ಮಾಡಿ ಪೂಜಾ ಕಾರ್ಯಗಳನ್ನು ನೆರವೇರಿಸಿದ್ದಾರೆ.
300ರೂ ಹಾಗೂ 50ರೂ ಟಿಕೆಟ್ ಮೂಲಕ ವಿಶೇಷ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಅಲ್ಲದೆ
ಮೆಟ್ಟುಲುಗಳ ಮೂಲಕ ಚಾಮುಂಡಿ ತಾಯಿ ದರ್ಶನ ಮಾಡಲು ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ.
ಬೆಳಗ್ಗೆ 5.30 ರಿಂದ ರಾತ್ರಿ 11 ಗಂಟೆಯವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.