ಮೈಸೂರು : ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಬಂಧನ ಮಾಡಲಾಗಿದ್ದು ಮೈಸೂರು ಜಿಲ್ಲೆ ನರಸೀಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ ಘಟನೆ ನಡೆದಿದೆ.
ಸುರೇಶ್ (30)ಬಂಧಿತ ಆರೋಪಿ.
ಅಂಗಡಿಗೆ ಹೋಗುತ್ತಿದ್ದ 6ವರ್ಷದ ಬಾಲಕಿಯನ್ನ ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ ಮಾಡಿದ್ದಾನೆ ಈ ವೇಳೆ
ಬಾಲಕಿ ಕಿರುಚಾಟ ಕೇಳಿ ಸ್ಥಳಕ್ಕೆ ಅಕ್ಕಪಕ್ಕದ ಮನೆಯವರು ದೌಡಾಯಿಸಿ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ.
ಬಾಲಕಿಯ ತಾಯಿ ನೀಡಿರುವ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ
ಬನ್ನೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.