ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಇನ್ಸ್ಟಾಗ್ರಾಮ್ ನಲ್ಲಿ ಅವಹೇಳನ ಮಾಡಿ ಪೋಸ್ಟ್ ಮಾಡಿದ್ದ ಯುವಕನ ಬಂಧನ ಮಾಡಿ ಬಳಿಕ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ.
ಮೈಸೂರು ಜಿಲ್ಲೆ ನರಸೀಪುರ ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದ ರಂಜಿನಿಶ್ ಬಂಧಿತ ಯುವಕ.
ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ ಸಂಬಂಧ.ಸಿದ್ರಾಮುಲ್ಲಾ ಖಾನ್ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆಯಿಲ್ಲ.ಈ ಸರ್ಕಾರ ಬಂದ ಮೇಲೆ ಹಿಂದೂಗಳ ಮೇಲೆ ಸಲೀಸಾಗಿ ಕೊಲೆಗಳು ಆಗುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಹಾಕಿದ್ದ ರಂಜಿನಿಶ್
ಈ ಬಗ್ಗೆ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದ ಮೆಲ್ಲಹಳ್ಳಿ ರವಿ. ರವಿ ಯವರ ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆ 504,505ನೇ (1)ಬಿ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ನರಸೀಪುರ ಪೋಲೀಸರು.